ದೇವನಹಳ್ಳಿ: ತಾಲ್ಲೂಕಿನ 11 ವರ್ಷದ ಬಾಲಕಿ ಮೇಲೆ 36 ವರ್ಷದ ಯುವಕನೊಬ್ಬ ಅತ್ಯಾಚಾರ ಎಸಗಿರುವ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಬಾಲಕಿಯೂ ಸಂಜೆ ಟ್ಯೂಷನ್‌ಗೆ ಹೋಗಿದ್ದಾಗ ಆರೋಪಿಯು ಈ ಕೃತ್ಯ ಎಸಗಿದ್ದಾನೆ.
‘ಆಕೆಯ ತಂದೆಯನ್ನು ಕೋವಿಡ್ ಕಾರಣದಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತ್ವರಿತವಾಗಿ ಕಳುಹಿಸಿಕೊಡಿ’ ಎಂದು ತಿಳಿಸಿ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಾಲಕಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ.
ವಿಶ್ವನಾಥಪುರ ಪೊಲೀಸ್ ಠಾಣೆಗೆ ಸಂತ್ರಸ್ತೆಯ ಪೋಷಕರು ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.