ADVERTISEMENT

ದೇವನಹಳ್ಳಿ: ಬೆಳೆ ವಿಮೆಗೆ ನೋಂದಣಿ

​ಪ್ರಜಾವಾಣಿ ವಾರ್ತೆ
Published 6 ಜುಲೈ 2024, 14:38 IST
Last Updated 6 ಜುಲೈ 2024, 14:38 IST

ದೇವನಹಳ್ಳಿ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸುವಂತೆ ಜಿಲ್ಲಾಧಿಕಾರಿ ಎನ್‌. ಶಿವಶಂಕರ ಕೋರಿದ್ದಾರೆ.

ಹವಾಮಾನ ಅಂಶವಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ ಮತ್ತು ಆರ್ದ್ರತೆ ಇತ್ಯಾದಿ ಮಾಹಿತಿನ ಆಧಾರಿಸಿ ಬೆಳೆ ವಿಮೆ ನಷ್ಟ ತೀರ್ಮಾನಿಸಲಾಗುತ್ತದೆ.

ಬೆಳೆ ಸಾಲ ಪಡೆಯದ ರೈತರು ಯೋಜನೆಯ ಫಲಾನುಭವಿಯಾಗಲು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ, ಕಂದಾಯ ರಶೀದಿ, ಖಾತೆ ಪುಸ್ತಕ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿ ಮತ್ತು ಸ್ವಯಂಘೋಷಿತ ಬೆಳೆ ವಿವರವನ್ನು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಲ್ಲಿ ನೋಂದಾಯಿಸಬೇಕು.

ADVERTISEMENT

ವಿಮೆ ಮಾಡಿಸುವ ರೈತರು ಫ್ರೂಟ್ಸ್ ತಂತ್ರಾಂಶದ ನೋಂದಣಿ ಸಂಖ್ಯೆ ಹೊಂದಿರಬೇಕಿದ್ದು, ನೋಂದಣಿ ಸಂಖ್ಯೆಗೆ ಪಹಣಿ ವಿವರ ಜೋಡಿಸಬೇಕು.

ಹೆಚ್ಚಿನ ಮಾಹಿತಿಗೆ ದೇವನಹಳ್ಳಿ ಮೊ.9480461234, ದೊಡ್ಡಬಳ್ಳಾಪುರ ಮೊ.9880210892, ಹೊಸಕೋಟೆ ಮೊ.8217210320, ನೆಲಮಂಗಲ ಮೊ.9880461607, ರೈತ ಸಂಪರ್ಕ ಕೇಂದ್ರ ಮೊ.8884141262, ಸಹಾಯವಾಣಿ ಸಂಖ್ಯೆ- 080 26564537 ಈ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.