ADVERTISEMENT

ಪರಿಶಿಷ್ಟ ಜಾತಿ ಕಾರಣ: ಅಂಗನವಾಡಿ ಕಾರ್ಯಕರ್ತೆ ಕೆಲಸಕ್ಕೆ ಅಡ್ಡಿ

​ಪ್ರಜಾವಾಣಿ ವಾರ್ತೆ
Published 29 ಜುಲೈ 2023, 0:00 IST
Last Updated 29 ಜುಲೈ 2023, 0:00 IST

ದೊಡ್ಡಬಳ್ಳಾಪುರ: ಇಲ್ಲಿನ ಮೆಳೆಕೋಟೆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆಯಾಗಿ ನಿಯೋಜನೆಗೊಂಡಿರುವ ಆನಂದಮ್ಮ ಅವರು ಪರಿಶಿಷ್ಟ ಜಾತಿ ಎಂಬ ಕಾರಣಕ್ಕೆ ಕೆಲಸ ನಿರ್ವಹಿಸಲು ಸ್ಥಳೀಯರು ಶುಕ್ರವಾರ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ

ರಾಜಘಟ್ಟ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿ ಆಗಿ ಕೆಲಸ ಮಾಡುತ್ತಿದ್ದ ಅವರು, ಕಾರ್ಯಕರ್ತೆ ಹುದ್ದೆಗೆ ಬಡ್ತಿ ಪಡೆದು ಮೆಳೆಕೋಟೆ ಅಂಗನವಾಡಿ ಕೇಂದ್ರಕ್ಕೆ ಜುಲೈ 25ರಂದು ವರ್ಗಾವಣೆಗೊಂಡಿದ್ದರು. ಇವರು ಸ್ಥಳೀಯ ಅಭ್ಯರ್ಥಿ ಅಲ್ಲ ಎನ್ನುವ ಕಾರಣಕ್ಕೆ ವರದಿ ಮಾಡಿಕೊಳ್ಳಲು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಜಾತಿ ತಾರತಮ್ಯ: ಈ ಬಗ್ಗೆ ಪ್ರತಿಕ್ರಿಯಿಸಿರುವ ಆನಂದಮ್ಮ,‘ಪರಿಶಿಷ್ಟ ಜಾತಿ ಮಹಿಳೆ ಎನ್ನುವ ಕಾರಣಕ್ಕೆ ಕಾರ್ಯಕರ್ತೆಯಾಗಿ ಕೆಲಸ ಮಾಡಲು ಅಡ್ಡಿಪಡಿಸಿದ್ದಾರೆ. ಈ ಬಗ್ಗೆ ಮೇಲಧಿಕಾರಿ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಂಡಿಲ್ಲ’ಎಂದು ದೂರಿದ್ದಾರೆ.

ADVERTISEMENT

‘ಆನಂದಮ್ಮ ಅವರು ಸೋಮವಾರದಿಂದ ಕೆಲಸಕ್ಕೆ ಹಾಜರಾಗಲು ಅಗತ್ಯ ಕ್ರಮಕೈಗೊಳ್ಳಲಾಗುವುದು. ಜತೆಗೆ ಗ್ರಾಮಸ್ಥರೊಂದಿಗೂ ಸಭೆ ನಡೆಸಲಾಗುವುದು. ಆದಾಗ್ಯೂ ಸ್ಥಳೀಯರು ಕೆಲಸಕ್ಕೆ ಅಡ್ಡಿಪಡಿಸಿದರೆ ದೂರು ದಾಖಲಿಸಲಾಗುವುದು’ ಎಂದು ಸಿಡಿಪಿಒ ರವಿಕುಮಾರ್ ತಿಳಿಸಿದ್ದಾರೆ.

ಗ್ರಾಮಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಆದರೆ, ಯಾರ ವಿರುದ್ಧವೂ ಪ್ರಕರಣ ದಾಖಲಿಸುವುದಿಲ್ಲ ಎಂದು ಆನಂದಮ್ಮ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.