ADVERTISEMENT

SSLC result 2024 | ಮೊರಾರ್ಜಿ ದೇಸಾಯಿ ಶಾಲೆಗೆ ಶೇ 100ರಷ್ಟು ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 9 ಮೇ 2024, 13:49 IST
Last Updated 9 ಮೇ 2024, 13:49 IST
ಕವನ ಎಚ್.
ಕವನ ಎಚ್.   

ಸೂಲಿಬೆಲೆ: ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದುಕೊಂಡಿದೆ ಎಂದು ಪ್ರಾಂಶುಪಾಲ ಬಸವರಾಜು ತಿಳಿಸಿದ್ದಾರೆ.

ಪರೀಕ್ಷೆಗೆ ಕುಳಿತ 47 ವಿದ್ಯಾರ್ಥಿಗಳ ಪೈಕಿ 47 ವಿದ್ಯಾರ್ಥಿಗಳೂ ಪಾಸಾಗಿದ್ದಾರೆ. ಕವನ ಎಚ್. 625 ಅಂಕಗಳಿಗೆ 599 ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ.  9 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 31 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 7 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT