ದೇವನಹಳ್ಳಿ: ಹೈದರಾಬಾದ್‌ನಲ್ಲಿ ಈಚೆಗೆ ನಡೆದ ‘ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2024’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ‘ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ’ ಪ್ರಶಸ್ತಿಗೆ ಭಾಜನವಾಗಿದೆ.
ಕಾರ್ಯಾಚರಣೆಯ ಶ್ರೇಷ್ಠತೆ, ಪ್ರಯಾಣಿಕರ ಉತ್ತಮ ಅನುಭವ, ಅತ್ಯಾಧುನಿಕ ತಂತ್ರಜ್ಞಾನದ ಬಳಕೆಗೆ ಆದ್ಯತೆ ನೀಡಿರುವುದನ್ನು ಗಮನಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸುಗಮ ಮತ್ತು ಒತ್ತಡ ಮುಕ್ತ ಪ್ರಯಾಣದ ಅನುಭವ ನೀಡಲು ವಿಮಾನ ನಿಲ್ದಾಣ ಪ್ರವೇಶ ಮತ್ತು ನಿರ್ಗಮನ ದ್ವಾರದಲ್ಲಿ ಮಾಹಿತಿ ಪ್ರದರ್ಶನ ಫಲಕಗಳನ್ನು ಹೆಚ್ಚು ಅಳವಡಿಸಲಾಗಿದೆ.
ನಿಲ್ದಾಣದಲ್ಲಿ ಉತ್ತಮ ಪರಿಸರ ಕಾಪಾಡಿಕೊಳ್ಳುವ ಜತೆಗೆ ಸುಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಏಕ ಬಳಕೆ ಪ್ಲಾಸ್ಟಿಕ್ ಅನ್ನು ನಿಷೇಧಿಸಲಾಗಿದೆ. ಅರಣ್ಯೀಕರಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಟರ್ಮಿನಲ್-2ರಲ್ಲಿ ದೇಶದ ಶ್ರೀಮಂತ ಸಂಸ್ಕೃತಿ, ಪರಂಪರೆ ಬಿಂಬಿಸುವ ವಿವಿಧ ರೂಪದ 60 ಕಲಾಕೃತಿಗಳನ್ನು ಪ‍್ರದರ್ಶಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.