ADVERTISEMENT

ದೊಡ್ಡಬಳ್ಳಾಪುರ: ಯುಪಿಎಸ್‌ಸಿ ಪರೀಕ್ಷೆಗೆ ಹೆದರಿ ಯುವಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2024, 15:41 IST
Last Updated 14 ಮಾರ್ಚ್ 2024, 15:41 IST
ಜಗದೀಶ್
ಜಗದೀಶ್   

ದೊಡ್ಡಬಳ್ಳಾಪುರ: ತಾಲ್ಲೂಕಿನ ನೆಲ್ಲುಕುಂಟೆ ಸಮೀಪದ ಮಜರಾಹೊಸಹಳ್ಳಿ‌ ಗ್ರಾಮದಲ್ಲಿ ಯುಪಿಎಸ್‌ಸಿ ಪರೀಕ್ಷೆಗೆ ಹೆದರಿ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜಗದೀಶ್ (28) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ಮಾರ್ಚ್‌ 12ರಂದು ಪೋಷಕರು ಊರಿಗೆ ಹೋದ ಸಂದರ್ಭದಲ್ಲಿ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಗದೀಶ್ ತಾಯಿ ಬುಧವಾರ ರಾತ್ರಿ ಮನೆಗೆ ಮರಳಿದಾಗ ವಿಷಯ ಗೊತ್ತಾಗಿದೆ.

‘ಯುಪಿಎಸ್‌ಸಿ ಪರೀಕ್ಷೆ ಎದುರಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಜರಾಹೊಸಹಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.