ADVERTISEMENT

ಹೆದ್ದಾರಿಗೆ ₹941.61 ಕೋಟಿ ಮಂಜೂರು: ಸಂಸದ ಅಣ್ಣಾಸಾಹೇಬ ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2024, 16:11 IST
Last Updated 2 ಫೆಬ್ರುವರಿ 2024, 16:11 IST
ಅಣ್ಣಾಸಾಹೇಬ ಜೊಲ್ಲೆ
ಅಣ್ಣಾಸಾಹೇಬ ಜೊಲ್ಲೆ   

ಚಿಕ್ಕೋಡಿ: ‘ತಾಲ್ಲೂಕಿನಲ್ಲಿ ಹಾದುಹೋಗುವ ಜೇವರ್ಗಿ– ಸಂಕೇಶ್ವರ ಹೆದ್ದಾರಿಯನ್ನು ಚಿಕ್ಕೋಡಿ ಪಟ್ಟಣದಿಂದ ಹುಕ್ಕೇರಿ ತಾಲ್ಲೂಕಿನ ಗೋಟೂರವರೆಗೆ 27 ಕಿ.ಮೀ.ವರೆಗೆ ಚತುಷ್ಪಥ ಹೆದ್ದಾರಿಯನ್ನಾಗಿ ಪರುರ್ತಿಸಲು ಕೇಂದ್ರ ಸರ್ಕಾರ ₹941.61 ಕೋಟಿ ಮಂಜೂರು ಮಾಡಿದೆ’ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದ್ದಾರೆ.

‘ರಾಷ್ಟ್ರೀಯ ಹೆದ್ದಾರಿ 548ರ ಚಿಕ್ಕೋಡಿ– ಗೋಟೂರು ಹೆದ್ದಾರಿಯನ್ನು ಚಿಕ್ಕೋಡಿ ಪಟ್ಟಣದ ಹೊರ ವಲಯದಲ್ಲಿ ಬೈಪಾಸ್‌ ರಸ್ತೆ ಸೇರಿದಂತೆ ಹೆದ್ದಾರಿ ನಿರ್ಮಿಸಲು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಲಾಗಿತ್ತು. ಚೆನೈ– ಮುಂಬೈ ನಡುವೆ ರಾಷ್ಟ್ರೀಯ ಹೆದ್ದಾರಿ 548ರ ಸಂಪರ್ಕ ಕಲ್ಪಿಸುವ ಮೂಲಕ ಉತ್ತರ ಕರ್ನಾಟಕದ ಆರ್ಥಿಕ ಚಟುವಟಿಕೆಗಳಿಗೆ ಈ ಹೆದ್ದಾರಿ ಅನುಕೂಲವಾಗಲಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT