ADVERTISEMENT

ಗೋಡೆ ಕುಸಿತ: ಗ್ರಾಮಕ್ಕೆ ಚನ್ನರಾಜ ಹಟ್ಟಿಹೊಳಿ ಭೇಟಿ

​ಪ್ರಜಾವಾಣಿ ವಾರ್ತೆ
Published 3 ಜನವರಿ 2024, 16:56 IST
Last Updated 3 ಜನವರಿ 2024, 16:56 IST
ಹಿರೇಬಾಗೇವಾಡಿ ಸಮೀಪದ ಬಡಾಲ ಅಂಕಲಗಿಯಲ್ಲಿ ಗೋಡೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು
ಹಿರೇಬಾಗೇವಾಡಿ ಸಮೀಪದ ಬಡಾಲ ಅಂಕಲಗಿಯಲ್ಲಿ ಗೋಡೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು   

ಹಿರೇಬಾಗೇವಾಡಿ: ಸಮೀಪದ ಬಡಾಲ ಅಂಕಲಗಿ ಗ್ರಾಮದಲ್ಲಿ ಮಂಗಳವಾರ ಆಕಸ್ಮಿಕ ಗೋಡೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟ ಚನ್ನಪ್ಪ ಕುರುಬರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಘಟನೆಯ ಬಗ್ಗೆ ಮಾಹಿತಿ ಪಡೆದು ಸರ್ಕಾರದಿಂದ ಕುಟುಂಬದವರಿಗೆ ಪರಿಹಾರ ಕೊಡಿಸುವ ವ್ಯವಸ್ಥೆ ಮಾಡಲಾಗುವುದೆಂದು ಭರವಸೆ ನೀಡಿದರು.

ತಹಶೀಲ್ದಾರ್‌ ಬಸವರಾಜ ನಾಗರಾಳ, ಹಿರೇಬಾಗೇವಾಡಿ ಸಿಪಿಐ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.