ಬೆಳಗಾವಿ: ‘ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಉಚಿತವಾಗಿ ಲ್ಯಾಪ್‌ಟಾಪ್ ವಿತರಿಸಬೇಕು’ ಎಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
‘ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಕೊಡುತ್ತಿರುವುದು ಒಳ್ಳೆಯ ಬೆಳವಣಿಗೆ. ಆದರೆ, ಪದವಿಯ ಪ್ರಥಮ ವರ್ಷದವರಿಗೆ ಮಾತ್ರವೇ ಅನ್ವಯ ಮಾಡಿರುವುದರಿಂದ ಉಳಿದವರಿಗೆ ಅನ್ಯಾಯವಾಗುತ್ತಿದೆ. ಅಲ್ಲದೇ ಈ ರೀತಿ ತಾರತಮ್ಯ ಮಾಡುವುದು ಸರಿಯಲ್ಲ’ ಎಂದು ತಿಳಿಸಿದರು.
‘ಸಂಬಂಧಿಸಿದ ಸಚಿವರು ಹಾಗೂ ಅಧಿಕಾರಿಗಳು ಪದವಿಯ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ನೀಡಬೇಕು’ ಎಂದು ಒತ್ತಾಯಿಸಿದರು.
ಎಬಿವಿಪಿ ನಗರ ಕಾರ್ಯದರ್ಶಿ ಕಿರಣ ದುಕಾನದಾರ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.