ADVERTISEMENT

ಪುಣೆ- ಬೆಂಗಳೂರು ಹೆದ್ದಾರಿಯಲ್ಲಿ ಕಾರು ಅಪಘಾತ; ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2023, 5:54 IST
Last Updated 14 ಅಕ್ಟೋಬರ್ 2023, 5:54 IST
   

ಎಂ.ಕೆ.ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ಸಮೀಪದ ಹೊಸಕಾದರವಳ್ಳಿ (ಇಟಗಿಕ್ರಾಸ್) ಬಳಿ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಶನಿವಾರ ಬೆಳಿಗ್ಗೆ ನಡೆದ ಕಾರು ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಪುರುಷ, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬ್ಲೆಸನ್ ಅಲೆಕ್ಸಾ ಮೃತ ವ್ಯಕ್ತಿ. ಗಂಭೀರವಾಗಿ ಗಾಯಗೊಂಡ ಜೋಶ್ ಮತ್ತು ಜೇಸಮ್ ಅವರನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮೂವರೂ ಪ್ರಯಾಣಿಸುತ್ತಿದ್ದ ಕಾರಿನ ಮುಂದಿನ ಟೈರ್ ಸಿಡಿದು ಕಾರ್ ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಪರಿಣಾಮ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ADVERTISEMENT

ಕಿತ್ತೂರು ಪಿಎಸ್ಐ ಪ್ರವೀಣ ಗಂಗೋಳ್ಳಿ, ಸಿಬ್ಬಂದಿ ರಮೇಶ ತೇಲಿ, ಬಾಹುಬಲಿ ಅಗಸಿಮನಿ ಭೇಟಿ ನೀಡಿ ಪರಿಶೀಲಿಸಿದರು. ಕ್ರೇನ್ ನೆರವಿನಿಂದ ಕಾರು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.