ADVERTISEMENT

ರಾಮದುರ್ಗ | ಶಬರಿ ಕೊಳ್ಳ ಪ್ರವಾಸಿ ತಾಣ ಮಾಡಲು ಕ್ರಮ: ಸಂಸದ ಜಗದೀಶ ಶೆಟ್ಟರ್‌

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2024, 15:59 IST
Last Updated 5 ಅಕ್ಟೋಬರ್ 2024, 15:59 IST
ರಾಮದುರ್ಗ ತಾಲ್ಲೂಕಿನ ಸುರೇಬಾನ ಸಮೀಪದ ಶಬರಿ ಕೊಳ್ಳದ ಪುಸ್ಕರಣಿಗಳನ್ನು ಸಂಸದ ಜಗದೀಶ ಶೆಟ್ಟರ್‌ವೀಕ್ಷಿಸಿದರು
ರಾಮದುರ್ಗ ತಾಲ್ಲೂಕಿನ ಸುರೇಬಾನ ಸಮೀಪದ ಶಬರಿ ಕೊಳ್ಳದ ಪುಸ್ಕರಣಿಗಳನ್ನು ಸಂಸದ ಜಗದೀಶ ಶೆಟ್ಟರ್‌ವೀಕ್ಷಿಸಿದರು   

ರಾಮದುರ್ಗ: ‘ತಾಲ್ಲೂಕಿನ ಸುರೇಬಾನ ಸಮೀಪದ ಶಬರಿ ಕೊಳ್ಳದ ದೇವಸ್ಥಾನವನ್ನು ಪ್ರವಾಸಿ ತಾಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು.

ತಾಲ್ಲೂಕಿನ ಶಬರಿ ಕೊಳ್ಳದ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ದೇವಿ ದರ್ಶನದ ನಂತರ ಮಾತನಾಡಿದ ಅವರು, ತಾಲ್ಲೂಕಿನಲ್ಲಿರುವ ಐತಿಹಾಸಿಕ ಶಬರಿಕೊಳ್ಳದಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ದೊರಕಿಸಿ ಅಭಿವೃದ್ಧಿ ಪಡಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ತಿಳಿಸಿದರು.

ರಾಮದುರ್ಗ ಮಂಡಲ ಅಧ್ಯಕ್ಷ ಡಾ. ಕೆ.ವಿ ಪಾಟೀಲ, ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ರಾಜೇಶ್ ಬೀಳಗಿ, ಸಂಗನಗೌಡರ ಪಾಟೀಲ, ನಿಂಗಪ್ಪ ಮೆಳ್ಳಿಕೇರಿ, ಮಹಾದೇವಪ್ಪ ಮದಕಟ್ಟಿ, ಶ್ರೀಶೈಲ ಮಳ್ಳಿಕೇರಿ, ನಿಂಗಪ್ಪ ಮುಳ್ಳೂರ, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ನಾರಾಯಣ್ ಹೂಲಗೇರಿ ಹಾಗೂ ಗ್ರಾಮಸ್ಥರು ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.