ADVERTISEMENT

ಬೆಳಗಾವಿ | ಬಿತ್ತನೆ ಬೀಜ: ದರದಲ್ಲಿ ಏರಿಳಿತ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2024, 23:30 IST
Last Updated 10 ಅಕ್ಟೋಬರ್ 2024, 23:30 IST
<div class="paragraphs"><p>ರೈತರಿಗೆ ಬಿತ್ತನೆ ಬೀಜ ವಿತರಿಸಲಾಯಿತು</p></div>

ರೈತರಿಗೆ ಬಿತ್ತನೆ ಬೀಜ ವಿತರಿಸಲಾಯಿತು

   

(ಸಂಗ್ರಹ ಚಿತ್ರ)

ಬೆಳಗಾವಿ: ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳಾದ ರಾಗಿ, ಗೋಧಿ ಮತ್ತು ಕಡಲೆ ದರ ತುಸು ಹೆಚ್ಚಾಗಿದೆ. ಜೋಳ, ಶೇಂಗಾ ಮತ್ತು ಕುಸುಬೆ ಬೀಜಗಳ ದರ ಕಡಿಮೆಯಾಗಿದೆ. ಉತ್ತರ ಕರ್ನಾಟಕ ಭಾಗದ ರೈತರಿಗೆ ತುಸು ಅನುಕೂಲವಾಗಿದ್ದರೆ, ದಕ್ಷಿಣ ಕರ್ನಾಟಕ ಭಾಗದವರಿಗೆ ದರದ ಬಿಸಿ ತಟ್ಟಿದೆ.

ADVERTISEMENT

ಕಳೆದ ವರ್ಷ ರಾಜ್ಯದ ಎಲ್ಲೆಡೆ ಬರಗಾಲ ಆವರಿಸಿದ್ದರಿಂದ ಬಿತ್ತನೆ ಬೀಜಗಳ ಕೊರತೆ ಉಂಟಾಗಿದೆ. ಕರ್ನಾಟಕ ರಾಜ್ಯ ಬೀಜ ನಿಗಮ, ರಾಷ್ಟ್ರೀಯ ಬೀಜ ನಿಗಮ ಹಾಗೂ ಕರ್ನಾಟಕ ರಾಜ್ಯ ಎಣ್ಣೆಬೀಜ ಬೆಳೆಗಾರರ ಮಹಾಮಂಡಳಿಯಿಂದ ಬಿತ್ತನೆ ಬೀಜಗಳನ್ನು ಬಿತ್ತಲು ರೈತರಿಗೆ ನೀಡಲಾಗಿತ್ತು. ಈಗ ರೈತರಿಂದ ಖರೀದಿಸಲಾಗಿದೆ.

‘ನಿಗಮ– ಮಂಡಳಿಗಳು ಕೂಡ ರೈತರಿಂದ ಶೇ 23ರಷ್ಟು ಹೆಚ್ಚು ದರ ನೀಡಿ ಖರೀದಿಸಿವೆ. ಅಂಥ ಬೀಜಗಳಿಗೆ ಶೇ 9 ರಿಂದ ಶೇ 13ರಷ್ಟು ದರ ಹೆಚ್ಚಾಗಿದೆ. ರೈತರಿಗೆ ಹೆಚ್ಚು ಲಾಭವಾಗಿದೆ’ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂಗಾರು ಮಳೆ ಕೂಡ ಉತ್ತಮವಾಗಿ ಸುರಿದಿದ್ದರಿಂದ ರೈತರು ಹೊಲಗಳನ್ನು ಹದ ಮಾಡುವಲ್ಲಿ ನಿರತರಾಗಿದ್ದಾರೆ. ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ನೀಡಲು ಕೃಷಿ ಇಲಾಖೆ ಸಿದ್ಧತೆ ನಡೆಸಿದೆ.

‘ಕಡಲೆ ಹಾಗೂ ಗೋಧಿ ಬಿತ್ತನೆ ಬೀಜಗಳು ದುಬಾರಿಯಾಗಿವೆ. ಅತಿವೃಷ್ಟಿಯ ಕಾರಣ ನಮ್ಮ ಸೋಯಾಬಿನ್‌ ಬೆಳೆ ಹಾಳಾಗಿದೆ. ಇದರ ಮಧ್ಯೆಯೇ ಬೀಜಗಳ ದರ ಏರಿಕೆ ಸಂಕಷ್ಟ ತಂದಿದೆ’ ಎಂದು ಸವದತ್ತಿ ತಾಲ್ಲೂಕಿನ ಚಿಕ್ಕುಂಬಿ ಗ್ರಾಮದ ರೈತ ಮೊಹಮ್ಮದ್‌ ಅಲಿ ದೊಡ್ಡಮನಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.