ADVERTISEMENT

ರಾಮದುರ್ಗ | ರೈಲು ಮಾರ್ಗ ಸಮೀಕ್ಷೆಗೆ ಯತ್ನ: ಅಶೋಕ ಪಟ್ಟಣ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2024, 14:33 IST
Last Updated 18 ನವೆಂಬರ್ 2024, 14:33 IST
ರಾಮದುರ್ಗದಲ್ಲಿ ಸೋಮವಾರ ಜರುಗಿದ ರಾಮದುರ್ಗ ರೈಲು ಹೋರಾಟ ಕ್ರಿಯಾ ಸಮಿತಿಯ ಮಹತ್ವದ ಸಭೆಯಲ್ಲಿ ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಮಾತನಾಡಿದರು.
ರಾಮದುರ್ಗದಲ್ಲಿ ಸೋಮವಾರ ಜರುಗಿದ ರಾಮದುರ್ಗ ರೈಲು ಹೋರಾಟ ಕ್ರಿಯಾ ಸಮಿತಿಯ ಮಹತ್ವದ ಸಭೆಯಲ್ಲಿ ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಮಾತನಾಡಿದರು.   

ರಾಮದುರ್ಗ: ಲೋಕಾಪೂರದಿಂದ ರಾಮದುರ್ಗ, ಸವದತ್ತಿ ಮೂಲಕ ಧಾರವಾಡಕ್ಕೆ ಸೇರುವ ಹೊಸ ರೈಲು ಮಾರ್ಗದ ಸಮೀಕ್ಷೆಗಾಗಿ ಮುಖಂಡರ ನಿಯೋಗ ಡಿಸೆಂಬರ್‌ ಕೊನೆಯ ವಾರದಲ್ಲಿ ದೆಹಲಿಗೆ ಹೋಗಿ ಕೇಂದ್ರ ರೈಲು ಸಚಿವರನ್ನು ಭೇಟಿ ಮಾಡಲಾಗುವುದು ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.

ರಾಮದುರ್ಗದ ರೈಲು ಹೋರಾಟ ಕ್ರಿಯಾ ಸಮಿತಿಯು ಸೋಮವಾರ ಇಲ್ಲಿನ ಪ್ರವಾಸಿ ಮಂದಿರದ ಆವರಣದಲ್ಲಿ ಸೇರಿದ್ದ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷಾತೀತ ಮತ್ತು ಜಾತ್ಯಾತೀತ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ನೀಡುವುದಾಗಿ ಅವರು ತಿಳಿಸಿದರು.

ಡಿ.9ರಿಂದ 20ರವರೆಗೆ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಅದು ಮುಗಿದ ತಕ್ಷಣ ಕ್ರಿಯಾ ಸಮಿತಿಯ ಸದಸ್ಯರನ್ನು ಒಳಗೊಂಡಂತೆ ರಾಮದುರ್ಗದ ಇತರ ಪಕ್ಷಗಳ ಮುಖಂಡರನ್ನು ದೆಹಲಿಗೆ ಕರೆದೊಯ್ದು ಕೇಂದ್ರದ ರೈಲು ಮಂತ್ರಿಗಳನ್ನು ಹಾಗೂ ರಾಜ್ಯ ರೈಲು ಮಂತ್ರಿಗಳನ್ನು ಭೇಟಿ ಮಾಡಿ ಸಮೀಕ್ಷೆ ಕಾರ್ಯವನ್ನು ಆರಂಭಿಸಲಾಗುವುದು ಎಂದು ಹೇಳಿದರು.

ADVERTISEMENT

ರೈಲು ಹೋರಾಟ ಕ್ರಿಯಾ ಸಮಿತಿಯ ಗೈಬು ಜೈನೆಖಾನ, ಮಹ್ಮದ್‌ಶೆಫಿ ಬೆಣ್ಣಿ, ಬಿ.ಆರ್‌. ದೊಡಮನಿ, ಹೋರಾಗಾರ ಬಸೀರ್‌ ಅಹ್ಮದ್‌ ಬೈರಕದಾರ, ರೈತ ಮುಖಂಡ ಮಲ್ಲಿಕಾರ್ಜುನ ರಾಮದುರ್ಗ, ಎಸ್‌.ಜಿ. ಚಿಕ್ಕನರಗುಂದ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.