ADVERTISEMENT

ಅಥಣಿ: ಜಲಶಕ್ತಿ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2019, 13:56 IST
Last Updated 17 ಸೆಪ್ಟೆಂಬರ್ 2019, 13:56 IST
ಅಥಣಿ ಪುರಸಭೆಯಲ್ಲಿ ನಡೆದ ಜಲಶಕ್ತಿ ಅಭಿಯಾನ ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಕವಲಾಪುರ ಮಾತನಾಡಿದರು
ಅಥಣಿ ಪುರಸಭೆಯಲ್ಲಿ ನಡೆದ ಜಲಶಕ್ತಿ ಅಭಿಯಾನ ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಕವಲಾಪುರ ಮಾತನಾಡಿದರು   

ಅಥಣಿ: ಇಲ್ಲಿನ ಪುರಸಭೆ ವತಿಯಿಂದ ಮಂಗಳವಾರ ಜಲಶಕ್ತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಉದ್ಘಾಟಿಸಿದ ಮುಖ್ಯಾಧಿಕಾರಿ ಮಹಾಂತೇಶ ಕವಲಾಪುರ ಮಾತನಾಡಿ, ‘ಪ್ರತಿಯೊಬ್ಬರೂ ನೀರಿನ ಬಗ್ಗೆ ಸಂಪೂರ್ಣವಾದ ತಿಳಿವಳಿಕೆ ಹೊಂದಬೇಕು. ಅಂತರ್ಜಲ ಮಟ್ಟ ಕುಸಿಯುತ್ತಿರುವುದರಿಂದ ಪ್ರತಿ ವರ್ಷ ನೀರಿನ ಸಮಸ್ಯೆ ಉಂಟಾಗುತ್ತಿದೆ. ಮುಂದೊಂದು ದಿನ ನೀರಿಗಾಗಿ ಯುದ್ಧ ನಡೆದರೂ ಆಶ್ಚರ್ಯ ಪಡಬೇಕಾಗಿಲ್ಲ. ಇದಕ್ಕೆ ಅವಕಾಶ ಕೊಡಬಾರದು. ನೀರನ್ನು ಹಿತಮಿತವಾಗಿ ಬಳಸಬೇಕು’ ಎಂದು ಸಲಹೆ ನೀಡಿದರು.

ಪ್ರಭಾರ ಸಿಡಿಪಿಒ ಉದಯ ಪಾಟೀಲ ಮಾತನಾಡಿ, ‘ನೀರಿನ ಉಳಿತಾಯ ಹಾಗೂ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ’ ಎಂದರು.

ADVERTISEMENT

ಆರೋಗ್ಯ ಇಲಾಖೆ ಅಧಿಕಾರಿ ಮುರುಗೇಶ ಇಂಗಳಿ ಮಾತನಾಡಿದರು.

ಬಿ.ಎಂ. ಬೋಳಿಶೆಟ್ಟಿ ಸ್ವಾಗತಿಸಿದರು. ಎ.ಎಲ್. ನದಾಫ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.