ADVERTISEMENT

ಮುಖ್ಯಮಂತ್ರಿ ಜೊತೆ ಮಾತನಾಡಿರುವೆ: ಬಿ.ಎಸ್. ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 4:19 IST
Last Updated 13 ಏಪ್ರಿಲ್ 2022, 4:19 IST
ಶಾಸಕ ಬಿ.ಎಸ್. ಯಡಿಯೂರಪ್ಪ
ಶಾಸಕ ಬಿ.ಎಸ್. ಯಡಿಯೂರಪ್ಪ   

ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡಿದ್ದೇನೆ. ತನಿಖೆ ಮಾಡಿಸುವುದಾಗಿ ಅವರು ಹೇಳಿದ್ದಾರೆ ಎಂದು ಶಾಸಕ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, 'ಪ್ರಕರಣದ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ‌ಕೊಡಲು ಬಯಸುವುದಿಲ್ಲ. ತನಿಖೆ ನಡೆಯಲಿ, ಸತ್ಯಾಸತ್ಯತೆ ಹೊರಬರಲಿ' ಎಂದು ಹೇಳಿದರು.

ಈಶ್ವರಪ್ಪ ರಾಜೀನಾಮೆಗೆ ವಿರೋಧ ಪಕ್ಷದವರು ಒತ್ತಾಯಿಸುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ, ಆ ಬಗ್ಗೆ ಏನನ್ನೂ ಪ್ರತಿಕ್ರಿಯೆ ಕೊಡುವುದಿಲ್ಲ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.