ADVERTISEMENT

ಹಸುಳೆ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2025, 16:29 IST
Last Updated 18 ಏಪ್ರಿಲ್ 2025, 16:29 IST

ಕಾಗವಾಡ (ಬೆಳಗಾವಿ ಜಿಲ್ಲೆ): ‘ತಾಲ್ಲೂಕಿನ ಮೋಳೆ ಗ್ರಾಮದ ಸರ್ಕಾರಿ ಆಸ್ಪತ್ರೆ ವೈದ್ಯರು ಮತ್ತು ಶುಶ್ರೂಷಕರ ಹೆಚ್ಚಿನ ಪ್ರಮಾಣದಲ್ಲಿ ಡೋಸ್‌ ನೀಡಿ, ನಿರ್ಲಕ್ಷ್ಯ ತೋರಿದ ಪರಿಣಾಮ ಒಂದೂವರೆ ತಿಂಗಳ ಹಸುಗೂಸು ಸಾವನ್ನಪ್ಪಿದೆ’ ಎಂದು ಆರೋಪಿಸಿ ಹಸುಳೆಯ ಪಾಲಕರು ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

‘ಅಥಣಿ ತಾಲ್ಲೂಕಿನ ಭರಮಣಕೊಡಿ ದುಂಡಪ್ಪ ಬೇವನೂರ ಅವರ ಮಗುವಿಗೆ ಗುರುವಾರ ಕಾಗವಾಡ ತಾಲ್ಲೂಕಿನ ಮೋಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕರು ನರ್ಸ್‌ಗಳು ಪೋಲಿಯೊಗೆ ಸಂಬಂಧಿಸಿದಂತೆ ಅಗತ್ಯ ಲಸಿಕೆ ನೀಡಿದ್ದರು. ರಾತ್ರಿ ಮಗುವಿಗೆ ಜ್ವರ ಕಾಣಿಸಿದ್ದರಿಂದ ಅಥಣಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮಗುವಿನ ಸ್ಥಿತಿ ಹದಗೆಟ್ಟಿದ್ದಕ್ಕೆ ಅಥಣಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಅಷ್ಟರಲ್ಲಿ ಮಗು ಮೃತಪಟ್ಟಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಮಗುವಿಗೆ ಹೃದಯ ತೊಂದರೆ ಇತ್ತು. ಆದರೂ ಮಗುವಿಗೆ ಲಸಿಕೆ ನೀಡಬಹುದು. ಲಸಿಕೆ ನೀಡಿದಾಗ ಸ್ವಲ್ಪ ಮಟ್ಟಿಗೆ ಜ್ವರ ಬರುತ್ತವೆ. ಈಗಾಗಲೇ ನಾಲ್ಕೈದು ಮಕ್ಕಳಿಗೆ ನೀಡಲಾಗಿದೆ. ಏನೂ ತೊಂದರೆ ಆಗಿಲ್ಲ. ಮಗುವಿಗೆ ರಾತ್ರಿ ಜ್ವರ ಹೆಚ್ಚಾದರೂ ಆಸ್ಪತ್ರೆಗೆ ತೋರಿಸದ ಪಾಲಕರು, ಬೆಳಿಗ್ಗೆ ಅಥಣಿ ಖಾಸಗಿ ಆಸ್ಪತ್ರೆಗೆ ತೋರಿಸಿದ್ದಾರೆ. ಬಳಿಕ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಮಾಡಲು ಮುಂದಾಗಿದ್ದು ಆಸ್ಪತ್ರೆಗೆ ಬರುವುದಕ್ಕಿಂತ ಮೊದಲೇ ಮಗು ಸಾವನಪ್ಪಿತ್ತು’ ಎಂದು ಅಥಣಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಬಸಗೌಡ ಕಾಗೆ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.