ಚನ್ನಮ್ಮನ ಕಿತ್ತೂರು: ‘ಭ್ರೂಣ ಹತ್ಯೆ ಪ್ರಕರಣಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಈ ಬಗ್ಗೆ ನಿರ್ಲಕ್ಷ್ಯ ಸಲ್ಲದು’ ಎಂದು ರಾಜ್ಯ ಮಾನವ ಹಕ್ಕುಗಳ ನಿರ್ದೇಶನಾಲಯದ ಸದಸ್ಯ ಸುರೇಶ ಒಂಟಗೋಡಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಡೊಂಬರಕೊಪ್ಪ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಾದ ಭ್ರೂಣ ಹತ್ಯೆಗಳ ಮಾಹಿತಿಯನ್ನು ಪಡೆದರು.
‘ಪೊಲೀಸ್ ಇಲಾಖೆಯವರು ಕಟ್ಟುನಿಟ್ಟಾಗಿ ಗಸ್ತು ತಿರುಗಬೇಕು. ಸಾರ್ವಜನಿಕರ ಸ್ತತ್ತು ರಕ್ಷಣೆಗೆ ಹೆಚ್ಚಿನ ಗಮನ ಹರಿಸಬೇಕು’ ಎಂದು ಸೂಚಿಸಿದರು.
ನಂತರ ತಾಲ್ಲೂಕಿನ ಹುಲಿಕಟ್ಟಿ ಬಳಿ ಇರುವ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು.
ತಹಶೀಲ್ದಾರ್ ರವೀಂದ್ರ ಹಾದಿಮನಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಘೋರ್ಪಡೆ, ತಾಲ್ಲೂಕು ವೈದ್ಯಾಧಿಕಾರಿ ಎಸ್.ಎಸ್.ಸಿದ್ದಣ್ಣವರ, ಕ್ಷೇತ್ರ ಶಿಕ್ಷಣಾಧಿಕಾರಿ ಚನಬಸಪ್ಪ ತುಬಾಕದ, ಕ್ರೈಂ ಪೊಲೀಸ್ ಉಪನಿರೀಕ್ಷಕ ಪ್ರವೀಣ ಕೋಟಿ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.