ADVERTISEMENT

ಬೆಳಗಾವಿ | 'ವಸತಿ ನಿಲಯ ಕಾಮಗಾರಿಗೆ ಶಂಕುಸ್ಥಾಪನೆ'

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2024, 16:26 IST
Last Updated 18 ಮಾರ್ಚ್ 2024, 16:26 IST
ಬೆಳಗಾವಿಯ ಶಿವಬಸವ ನಗರದ ಡಾ.ಎಸ್.ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೋಮವಾರ ಶಿಲಾನ್ಯಾಸ ನೆರವೇರಿಸಿದರು
ಬೆಳಗಾವಿಯ ಶಿವಬಸವ ನಗರದ ಡಾ.ಎಸ್.ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೋಮವಾರ ಶಿಲಾನ್ಯಾಸ ನೆರವೇರಿಸಿದರು   

ಬೆಳಗಾವಿ: ಇಲ್ಲಿನ ಶಿವಬಸವ ನಗರದ ಡಾ.ಎಸ್.ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು‌.

'₹10 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಸತಿ ನಿಲಯದಲ್ಲಿ 600 ವಿದ್ಯಾರ್ಥಿನಿಯರಿಗೆ ವಸತಿ ಸೌಕರ್ಯ ಕಲ್ಪಿಸಲಾಗುವುದು' ಎಂದು ಕಾಲೇಜಿನ ಕಾರ್ಯಾಧ್ಯಕ್ಷ ಎಫ್.ವಿ.ಮಾನ್ವಿ ಹೇಳಿದರು.

ಗದಗ-ಡಂಬಳದ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ, ಶಿವಮೊಗ್ಗದ ಆನಂದಪುರದ ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಹುಬ್ಬಳ್ಳಿಯ ಶಾಂತಾಶ್ರಮದ ಅಭಿನವ ಸಿದ್ಧಾರೂಢ ಸ್ವಾಮೀಜಿ, ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ, ಶೇಗುಣಸಿಯ ವಿರಕ್ತಮಠದ ಮಹಾಂತಪ್ರಭು ಸ್ವಾಮೀಜಿ, ಆನಂದ ಗಡ್ಡದೇವರಮಠ, ಬಸವರಾಜ ರೊಟ್ಟಿ, ವಿನಯ ನಾವಲಗಟ್ಟಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.