ADVERTISEMENT

ಬೆಳಗಾವಿ: ಆ.3ರಂದು ‘ಕಾಹೇರ್‌’ ಘಟಿಕೋತ್ಸವ

​ಪ್ರಜಾವಾಣಿ ವಾರ್ತೆ
Published 30 ಜುಲೈ 2022, 15:14 IST
Last Updated 30 ಜುಲೈ 2022, 15:14 IST

ಬೆಳಗಾವಿ: ಇಲ್ಲಿನ ಕೆಎಲ್‌ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ (ಕಾಹೇರ್‌), ಡೀಮ್ಡ್‌ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ ಸಮಾರಂಭ ಆಗಸ್ಟ್‌ 3ರಂದು ಬೆಳಿಗ್ಗೆ 11ಕ್ಕೆ ಕೆಎಲ್‌ಇ ಶತಮಾನೋತ್ಸವ ಭವನದಲ್ಲಿ ನಡೆಯಲಿದೆ.

ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್‌ ನಾರಾಯಣ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಕಾಹೇರ್‌ನ ಕುಲಪತಿ, ಕೆಎಲ್‌ಇ ಸಂಸ್ಥೆಯ ಕಾರ‍್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅಧ್ಯಕ್ಷತೆ ವಹಿಸಲಿದ್ದಾರೆ.

ಘಟಿಕೋತ್ಸವದಲ್ಲಿ ಪದವಿ ಹಾಗೂ ವಿವಿಧ ಡಿಪ್ಲೊಮಾ ಉತ್ತೀರ್ಣಗೊಂಡ ಅಭ್ಯರ್ಥಿಗಳು ಮತ್ತು ನಿಯಂತ್ರಕ ಮಂಡಳಿಗಳ ನಿಬಂಧನೆಗಳಿಗೆ ಅನುಗುಣವಾಗಿ ಇಂಟರ್ನ್‌ಶಿಪ್‌ (ಜುಲೈ 28ಕ್ಕೆ ಮುಗಿದ) ಪ್ರಮಾಣಪತ್ರ, ಪ್ರಶಸ್ತಿಗಳನ್ನು ನೀಡಲಾಗುವುದು.

ADVERTISEMENT

ಈ ಬಾರಿ ಒಟ್ಟು 14 ಪಿಎಚ್‌ಡಿ, 10 ಪೋಸ್ಟ್ ಡಾಕ್ಟರಲ್, 37 ಚಿನ್ನದ ಪದಕಗಳು ಸೇರಿದಂತೆ ಆರೋಗ್ಯ ವಿಜ್ಞಾನದ ವಿವಿಧ ವಿಭಾಗಗಳಲ್ಲಿ ಒಟ್ಟು 1,502 ವಿದ್ಯಾರ್ಥಿಗಳಿಗೆ ಪದವಿ, ಪ್ರಮಾಣ ಪತ್ರ ನೀಡಲಾಗುತ್ತಿದೆ. 494 ಸ್ನಾತಕೋತ್ತರ ಪದವಿ, 909 ಪದವಿ, 11 ಸ್ನಾತಕೋತ್ತರ ಡಿಪ್ಲೊಮಾ, 34 ಸರ್ಟಿಫಿಕೇಟ್ ಕೋರ್ಸ್, 8 ಫೆಲೋಶಿಪ್ ಮತ್ತು 22 ಡಿಪ್ಲೊಮಾ ಪ್ರಮಾಣ ಪತ್ರ ನೀಡಲಾಗುತ್ತದೆ.

ಘಟಿಕೋತ್ಸವದ ವಿವರಗಳನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ www.kledeemeduniversity.edu.in ಇದರಲ್ಲಿ ನೋಡಬಹುದು ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.