ಬೆಳಗಾವಿ: ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಸ್ಪರ್ಧೆಯಿಂದಾಗಿ ರಾಜ್ಯದ ಗಮನಸೆಳೆದಿರುವ ಮಹಾನಗರಪಾಲಿಕೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ.
58 ವಾರ್ಡಗಳಿದ್ದು, 385 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿಯ 55 ಹಾಗೂ ಕಾಂಗ್ರೆಸ್‌ನ 45 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಮತದಾರರು ಬರೆದಿದ್ದು, ಬಹಿರಂಗಗೊಳ್ಳಲು ಕೆಲವೇ ಸಮಯ ಉಳಿದಿದೆ.
ಮತ ಎಣಿಕೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅಭ್ಯರ್ಥಿಗಳು, ರಾಜಕೀಯ ಪಕ್ಷದವರು, ಮತ ಎಣಿಕೆ ಏಜೆಂಟರು ಮತ ಎಣಿಕೆ ಕೇಂದ್ರವಾದ ಬಿ.ಕೆ. ಮಾಡೆಲ್ ಶಾಲೆಯತ್ತ ಬರುತ್ತಿದ್ದಾರೆ.
ಇದುವರೆಗೆ ಭಾಷೆ ಆಧಾರದ ಮೇಲೆ ನಡೆಯುತ್ತಿದ್ದ ಚುನಾವಣೆಯು ರಾಜಕೀಯ ಪಕ್ಷಗಳ ರಂಗಪ್ರವೇಶದಿಂದ ರಂಗೇರಿದೆ.
ಮತ ಎಣಿಕೆ ಕೇಂದ್ರದ ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಗರವೂ ಸೇರಿದಂತೆ ತಾಲ್ಲೂಕಿನಾದ್ಯಂತ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.