ADVERTISEMENT

ಬೆಳಗಾವಿ | ಮಹಾಂತೇಶ ನಗರದಲ್ಲಿ ಮನೆಕಳ್ಳತನ

​ಪ್ರಜಾವಾಣಿ ವಾರ್ತೆ
Published 7 ಜುಲೈ 2024, 16:10 IST
Last Updated 7 ಜುಲೈ 2024, 16:10 IST
ಕಳ್ಳತನ (ಪ್ರಾತಿನಿಧಿಕ ಚಿತ್ರ)
ಕಳ್ಳತನ (ಪ್ರಾತಿನಿಧಿಕ ಚಿತ್ರ)   

ಬೆಳಗಾವಿ: ಇಲ್ಲಿನ ಮಹಾಂತೇಶ ನಗರದಲ್ಲಿ ಶನಿವಾರ ರಾತ್ರಿ ಮನೆಗೆ ನುಗ್ಗಿದ ಕಳ್ಳರು, 150 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ.
ನಿವೃತ್ತ ಎಎಸ್‌ಐ ಮಹಾದೇವ ಬಾಗೋಡಿ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳತನವಾಗಿದೆ.

‘ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ತನಿಖೆ ಕೈಗೊಂಡಿದ್ದೇವೆ. ಕೆಲವು ಸುಳಿವು ಸಿಕ್ಕಿದ್ದು, ತ್ವರಿತವಾಗಿ ಆರೋಪಿಗಳನ್ನು ಬಂಧಿಸುತ್ತೇವೆ’ ಎಂದು ಮಾಳಮಾರುತಿ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಜೆ.ಎಂ.ಕಾಲಿಮಿರ್ಚಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT