ADVERTISEMENT

ಬೆಳಗಾವಿ | ಹಾಲಿನ ದರ ಏರಿಕೆಗೆ ಖಂಡನೆ: ಬಿಜೆಪಿಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2024, 6:27 IST
Last Updated 1 ಜುಲೈ 2024, 6:27 IST
<div class="paragraphs"><p>&nbsp;ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.</p></div>

 ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

   

ಬೆಳಗಾವಿ: ಹಾಲಿನ ದರ ಏರಿಕೆ ಖಂಡಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಹೆಗಲ ಮೇಲೆ ಹಾಲಿನ ಕ್ಯಾನ್ ಎತ್ತು ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ADVERTISEMENT

'ಕಾಂಗ್ರೆಸ್ ಸರ್ಕಾರ ಕಳೆದ 8 ತಿಂಗಳಿಂದ ರೈತರಿಗೆ ಹಾಲಿನ ಪ್ರೋತ್ಸಾಹಧನ ನೀಡುತ್ತಿಲ್ಲ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರಾಜ್ಯದ ಪಾಲು ನೀಡುತ್ತಿಲ್ಲ. ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸದೆ,

ರೈತ ವಿರೋಧಿಯಾಗಿ ಕೆಲಸ ಮಾಡುತ್ತಿದೆ' ಎಂದು ಆರೋಪಿಸಿದರು.

ಪಕ್ಷದ ಮಹಾನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, 'ಲೋಕಸಭೆ ಚುನಾವಣೆಯಲ್ಲಿ ಜನರಿಗೆ ನೆರವಾಗುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಈಗ ಅಗತ್ಯ ವಸ್ತುಗಳ ದರ ಹೆಚ್ಚಿಸಿ ಜನರನ್ನು ಸಂಕಷ್ಟಕ್ಕೆ ತಳ್ಳಿದೆ. ಈ ಸರ್ಕಾರ ಅಗತ್ಯ ವಸ್ತುಗಳ ದರ ಇಳಿಸಬೇಕು. ಇಲ್ಲವೇ ಅಧಿಕಾರ ಬಿಟ್ಟು ತೊಲಗಬೇಕು' ಎಂದು ಆಗ್ರಹಿಸಿದರು.

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ, ಮಲ್ಲಿಕಾರ್ಜುನ ಮಾದಮ್ಮನವರ, ಸಂತೋಷ ಹಡಪದ, ಲೀನಾ ಟೋಪಣ್ಣವರ, ಎಫ್.ಎಸ್.ಸಿದ್ದನಗೌಡರ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.