ADVERTISEMENT

ಆತ್ಮಹತ್ಯೆಯಿಂದ ದೂರವಿರಲು ಕರೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 6:55 IST
Last Updated 19 ಸೆಪ್ಟೆಂಬರ್ 2024, 6:55 IST
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಬಿ.ಇ.ರಂಗಸ್ವಾಮಿ ಉದ್ಘಾಟಿಸಿದರು
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಬಿ.ಇ.ರಂಗಸ್ವಾಮಿ ಉದ್ಘಾಟಿಸಿದರು   

ಬೆಳಗಾವಿ: ‘ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನವನ್ನು ಉತ್ತಮ ಕೆಲಸಕ್ಕೆ ಬಳಸಿ ಪ್ರಗತಿ ಸಾಧಿಸಬೇಕು. ಪಾಲಕರೂ ತಮ್ಮ ಮಕ್ಕಳ ಮೇಲೆ ನಿಗಾ ವಹಿಸಿ, ಅವರ ಭಾವನೆಗೆ ಮಹತ್ವ ನೀಡಬೇಕು’ ಎಂದು ಕುಲಸಚಿವ ಬಿ.ಇ.ರಂಗಸ್ವಾಮಿ ಹೇಳಿದರು.

ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಆತ್ಮಹತ್ಯೆ ಎಂಬುದು ಪಾಪದ ಕೆಲಸ. ಅದರಿಂದ ಎಲ್ಲರೂ ದೂರವಿರಬೇಕು’ ಎಂದರು.

ADVERTISEMENT

ಬಿಮ್ಸ್ ಆಸ್ಪತ್ರೆ ಮಾನಸಿಕ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ.ಚಂದ್ರಶೇಖರ ಟಿ.ಆರ್., ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಗೀತಾ ಕಾಂಬಳೆ ಮಾತನಾಡಿದರು. ಡಾ.ಸುಮೀತಕುಮಾರ ದುರಗೋಜಿ, ಡಾ.ಉತ್ತಮ ಶೇಲಾರಮ ಉಪನ್ಯಾಸ ನೀಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾಜಿ ಮಾಳಗೆನ್ನವರ, ಸವಿತಾ ತಿಗಡಿ, ಪ್ರೊ.ವಿವೇಕ ರೆಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.