ADVERTISEMENT

ರಾಜ್ಯದಲ್ಲಿ ಮಹಿಳೆಯರಿಗೆ ಇಲ್ಲ ರಕ್ಷಣೆ: ಬಿಜೆಪಿ ಸತ್ಯಶೋಧನಾ ಸಮಿತಿ ಆರೋಪ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2023, 13:40 IST
Last Updated 17 ಡಿಸೆಂಬರ್ 2023, 13:40 IST
<div class="paragraphs"><p>ಬಿಜೆಪಿ ಸತ್ಯಶೋಧನಾ ಸಮಿತಿ</p></div>

ಬಿಜೆಪಿ ಸತ್ಯಶೋಧನಾ ಸಮಿತಿ

   

ಬೆಳಗಾವಿ: ‘ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ, ರಾಜ್ಯದಲ್ಲಿ 42 ಸಾವಿರ ಅಪರಾಧ ಪ್ರಕರಣ ವರದಿಯಾಗಿವೆ’ ಎಂದು ಬಿಜೆಪಿ ಸತ್ಯಶೋಧನಾ ತಂಡದ ಸದಸ್ಯರು ಆರೋಪಿಸಿದರು.

ತಾಲ್ಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ, ಹಲ್ಲೆ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ, ತಂಡದಲ್ಲಿದ್ದ  ಸಂಸದರಾದ ಅಪರಜಿತಾ ಸಾರಂಗಿ, ಸುನೀತಾ ದುಗ್ಗಲ್, ಲಾಕೆಟ್ ಚಟರ್ಜಿ, ರಂಜಿತಾ ಕೋಲಿ ಹಾಗೂ ಪಕ್ಷದ ರಾಷ್ಟ್ರೀಯ ಘಟಕದ ಕಾರ್ಯದರ್ಶಿ ಆಶಾ ಲಾಕ್ರ ಅವರು, ಆಸ್ಪತ್ರೆಯಲ್ಲಿ ಸಂತ್ರಸ್ತೆ ಭೇಟಿಯಾಗಿ ಸಮಸ್ಯೆ ಆಲಿಸಿದರು.

ADVERTISEMENT

‘ಪುರುಷರು ಮಹಿಳೆಯನ್ನು ಬೆತ್ತಲೆಗೊಳಿಸಿದ್ದಾರೆ. ಅವರ ಗುಪ್ತಾಂಗದಲ್ಲಿ ಖಾರದ ಪುಡಿ ಹಾಕಿ, ಥಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಕ್ಷೇತ್ರದಲ್ಲೇ ಅಮಾನವೀಯ ಘಟನೆ ನಡೆದಿದೆ. ಕರ್ನಾಟಕದಲ್ಲಿ ಮಹಿಳೆಯರಿಗೆ ಅಸುರಕ್ಷಿತ ವಾತಾವರಣ ಇರುವ ಬಗ್ಗೆ ಮುಖ್ಯಮಂತ್ರಿ ಉತ್ತರಿಸಬೇಕಿದೆ’ ಎಂದು ಒತ್ತಾಯಿಸಿದರು.

ಸಂಸದೆ ಮಂಗಲಾ ಅಂಗಡಿ, ಶಾಸಕರಾದ ಶಶಿಕಲಾ ಜೊಲ್ಲೆ, ಅಭಯ ಪಾಟೀಲ, ಮೇಯರ್ ಶೋಭಾ ಸೋಮನಾಚೆ, ಉಪಮೇಯರ್ ರೇಷ್ಮಾ ಪಾಟೀಲ, ಸಂಜಯ ಪಾಟೀಲ, ಅನಿಲ ಬೆನಕೆ, ಮಹಾಂತೇಶ ಕವಟಗಿಮಠ ಇದ್ದರು.

‌ಆಯೋಗದ ಭೇಟಿ: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಕೊಂಗಡುಪ್ ನೇತೃತ್ವದ ತಂಡ, ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದ ತಂಡದವರು ಜಿಲ್ಲಾಸ್ಪತ್ರೆ ಮತ್ತು ಹೊಸ ವಂಟಮೂರಿಗೆ ಭೇಟಿ ಕೊಟ್ಟು, ಈ ಪ್ರಕರಣದ ಕುರಿತು ಮಾಹಿತಿ ಪಡೆದರು. ಆರ್.ಕೆ.ದುಬೆ, ಅಮೃತಾ ಸೋಲಂಕಿ, ರಾಧಾಕಾಂತ ತ್ರಿಪಾಠಿ, ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ, ಸಮಾಜಕಲ್ಯಾಣ ಇಲಾಖೆ ಜಂಟಿನಿರ್ದೇಶಕ ಲಕ್ಷ್ಮಣ ಬಬಲಿ, ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.