ಬೆಳಗಾವಿ: ಇಲ್ಲಿ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಸಂಸದರು, ಶಾಸಕರು ಹಾಗೂ ಮುಖಂಡರು ಸಭೆ ನಡೆಸಿದರು.
‘ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇವೆ’ ಎಂಬ ನಿರ್ಣಯ ಕೈಗೊಂಡರು. ಹಿರಿಯ ನಾಯಕರು ನೀಡಿದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವುದಾಗಿ ಆಯಾ ಶಾಸಕರು ತಿಳಿಸಿದರು. ಅಭಿವೃದ್ಧಿ ಕೆಲಸಗಳನ್ನೇ ಮುಂದಿಟ್ಟುಕೊಂಡು ಮತದಾರರನ್ನು ಸೆಳೆಯುವುದು ಮತ್ತಿತರ ವಿಷಯಗಳ ಕುರಿತು ಚರ್ಚಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಅರಣ್ಯ ಸಚಿವ ಉಮೇಶ ಕತ್ತಿ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಸಂಸದರಾದ ಮಂಗಲಾ ಅಂಗಡಿ, ಅಣ್ಣಾಸಾಹೇಬ ಜೊಲ್ಲೆ, ಈರಣ್ಣ ಕಡಾಡಿ, ಶಾಸಕರಾದ ಶ್ರೀಮಂತ ಪಾಟೀಲ, ಮಹೇಶ ಕುಮಠಳ್ಳಿ, ಮಹಾಂತೇಶ ದೊಡಗೌಡರ, ಮಹಾದೇವಪ್ಪ ಯಾದವಾಡ, ಅನಿಲ ಬೆನಕೆ, ವಿಧಾನಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ರವಿಕುಮಾರ್, ಅರುಣ ಶಹಾಪುರ, ಹಣಮಂತ ನಿರಾಣಿ, ಕೆಎಲ್‌ಇ ಸೊಸೈಟಿ ನಿರ್ದೇಶಕ ಮಹಾಂತೇಶ ಕವಟಗಿಮಠ ಇದ್ದರು.
ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹಾಗೂ ಲಕ್ಷ್ಮಣ ಸವದಿ ಅಕ್ಕಪಕ್ಕದಲ್ಲೇ ಕುಳಿತರೂ ಮುಖ ಕೊಟ್ಟು ಮಾತನಾಡಲಿಲ್ಲ. ಇದು ಚರ್ಚೆಗೆ ಗ್ರಾಸವಾಯಿತು. ಶಾಸಕರಾದ ರಮೇಶ ಜಾರಕಿಹೊಳಿ, ಅಭಯ ಪಾಟೀಲ ಸಭೆಗೆ ಗೈರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.