ADVERTISEMENT

ಜನರ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್‌ ಸರ್ಕಾರ: ಮಹಾದೇವ ಶೆಕ್ಕಿ

​ಪ್ರಜಾವಾಣಿ ವಾರ್ತೆ
Published 20 ಜೂನ್ 2024, 13:15 IST
Last Updated 20 ಜೂನ್ 2024, 13:15 IST
ರಾಜ್ಯದಲ್ಲಿ ತೈಲಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಅರಭಾವಿ ಮಂಡಲ ಕಾರ್ಯಕರ್ತರು ಮೂಡಲಗಿಯ ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮಹಾದೇವ ಸಣ್ಣಮುರಿ ಅವರಿಗೆ ಮನವಿ ನೀಡಿದರು
ರಾಜ್ಯದಲ್ಲಿ ತೈಲಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಅರಭಾವಿ ಮಂಡಲ ಕಾರ್ಯಕರ್ತರು ಮೂಡಲಗಿಯ ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮಹಾದೇವ ಸಣ್ಣಮುರಿ ಅವರಿಗೆ ಮನವಿ ನೀಡಿದರು    

ಮೂಡಲಗಿ: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಕಾಂಗ್ರೆಸ್‌ ಅರ್ಕಾರವು ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಬಿಜೆಪಿ ಅರಭಾವಿ ಮಂಡಲ ಕಾರ್ಯಕರ್ತರು ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸೈಕಲ್‌ಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ಬಿಜೆಪಿ ಅರಭಾವಿ ಮಂಡಲದ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ ಮಾತನಾಡಿ ‘ಅಧಿಕಾರಕ್ಕೆ ಬಂದರೆ ಎಲ್ಲ ಬೆಲೆಗಳನ್ನು ಇಳಿಸುತ್ತೇವೆ ಹಾಗೂ ಉಚಿತ ಐದು ಭಾಗ್ಯಗಳನ್ನು ನೀಡುತ್ತೇವೆ ಎಂದು ಹೇಳಿತ್ತು. ಈಗ ವಿದ್ಯುತ್‌ ದರ ಹೆಚ್ಚಳ, ಮದ್ಯದ ಬೆಲೆ ಹೆಚ್ಚಳ, ಆಸ್ತಿ ನೋಂದಣಿ ಸ್ಟಾಂಪ್ ದರ ಹೆಚ್ಚಳ ಮಾಡಿದೆ. ಈಗ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಹಚ್ಚಿಸಿ ಸಾರಿಗೆಯನ್ನು ದುಬಾರಿ ಮಾಡಿದೆ’ ಎಂದು ಕಾಂಗ್ರೆಸ್‌ ಪಕ್ಷವನ್ನು ಟೀಕಿಸಿದರು.

ಅರಭಾವಿ ಮಂಡಳ ಅಧ್ಯಕ್ಷ ಮಹಾದೇವ ಶೆಕ್ಕಿ ಮಾತನಾಡಿ ‘ಪರಿಶಿಷ್ಟ ಜಾತಿ, ಪಂಗಡಕ್ಕೆ ಇಟ್ಟ ಹಣವನ್ನು ಕಾಂಗ್ರೆಸ್‌ ಸರ್ಕಾರವು ಬೇರೆ ಉದ್ದೇಶಗಳಿಗೆ ಬಳಸಿಕೊಂಡಿದೆ. ರಾಜ್ಯದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ನಡೆದರೂ ಸರ್ಕಾರವು ಕಣ್ಣು ಮುಚ್ಚಿಕೊಂಡು ಕೂತಿದೆ. ಕಾಂಗ್ರೆಸ್‌ ಸರ್ಕಾರವು ಜನರ ವಿಶ್ವಾಸವನ್ನು ಕಳೆದುಕೊಂಡಿದೆ’ ಎಂದು ಹರಿಹಾಯ್ದರು.

ADVERTISEMENT

ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ಮಹಾದೇವ ಸನ್ನಮುರಿ ಅವರಿಗೆ ಪ್ರತಿಭಟನಾಕಾರರು ಮನವಿ ನೀಡಿದರು. ಪ್ರತಿಭಟನೆಯಿಂದ ಕಲ್ಮೇಶ್ವರ ವೃತ್ತದಲ್ಲಿ ವಾಹನ ಸಂಚಾರಕ್ಕೆ ವ್ಯತ್ಯಯವಾಯಿತು.

ಪ್ರತಿಭಟನೆಯಲ್ಲಿ ರವೀಂದ್ರ ಸೋನವಾಲಕರ, ಕಾರ್ಯಕರ್ತರಾದ ಹಣಮಂತ ಗುಡ್ಲಮನಿ, ಪಾಂಡು ಮಹೇಂದ್ರಕರ, ಅನ್ವರ ನದಾಫ, ಈರಪ್ಪ ಬನ್ನೂರ, ರೇವಪ್ಪ ಕುರುಶೆಟ್ಟಿ, ಪರಪ್ಪ ಹಡಪದ, ಚೇತನ ಹೊಸಕೋಟಿ, ಸಿದ್ದು ದುರುದುಂಡಿ, ಸಿದ್ದು ಗಡ್ಡೇಕಾರ, ಯಲ್ಲಾಲಿಂಗ ವಾಳದ, ಆನಂದ ಟಪಾಲದಾರ, ಚಂದ್ರಶೇಖರ ಪತ್ತಾರ, ರಾಜು ಬೆಳ್ಳೇಶಿ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳ ಬಿಜೆಪಿ ಮುಖಂಡರು, ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.