ADVERTISEMENT

ಅಥಣಿ | ಕೈಗಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟ: ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 21 ಮೇ 2024, 14:18 IST
Last Updated 21 ಮೇ 2024, 14:18 IST
ಸುನಂದಾ ಸಿದ್ದಪ್ಪ ತೇಲಿ
ಸುನಂದಾ ಸಿದ್ದಪ್ಪ ತೇಲಿ   

ಅಥಣಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿನ ಪ್ರಿಯಾ ಎಕ್ಸ್‌ಪೋರ್ಟ್ ಕೈಗಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡು ಸತ್ತಿಗ್ರಾಮದ ಸುನಂದಾ ಸಿದ್ದಪ್ಪ ತೇಲಿ ಎಂಬುವರು ಸಾವನ್ನಪ್ಪಿದ್ದು, ಇನ್ನಿಬ್ಬರು ಮಹಿಳೆಯರ ಸ್ಥಿತಿ ಗಂಭೀರವಾಗಿದೆ.

‘ಮಂಗಳವಾರ ಬೆಳಿಗ್ಗೆ 10ಕ್ಕೆ ದುರ್ಘಟನೆ ಸಂಭವಿಸಿದ್ದು, ಬಾಯ್ಲರ್ ಸ್ಫೋಟದ ತೀವ್ರತೆಗೆ ಕಾರ್ಖಾನೆ ಗೋಡೆಗೆ ಹಾನಿ ಆಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು, ಬೆಂಕಿ ನಂದಿಸಿದ್ದಾರೆ’ ಎಂದು ಅಥಣಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT