ADVERTISEMENT

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2024, 8:50 IST
Last Updated 20 ಅಕ್ಟೋಬರ್ 2024, 8:50 IST
<div class="paragraphs"><p>ಬೆಳಗಾವಿ ವಿಮಾನ ನಿಲ್ದಾಣ</p></div>

ಬೆಳಗಾವಿ ವಿಮಾನ ನಿಲ್ದಾಣ

   

ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣವನ್ನು ಬಾಂಬ್ ಇಟ್ಟು ಸ್ಫೋಟ ಮಾಡುವುದಾಗಿ ಇ ಮೇಲ್ ಮೂಲಕ‌ ಸಂದೇಶ ಕಳಿಸಲಾಗಿದೆ. ಇದರಿಂದ ಎಚ್ಚೆತ್ತ ಅಧಿಕಾರಿಗಳು‌ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಿದ್ದಾರೆ.

ವಿಮಾನ ನಿಲ್ದಾಣದ‌ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಚೈನ್ನೈನಿಂದ ಅಪರಿಚಿತರಿಂದ ಬೆದರಿಕೆ ಪತ್ರದ‌ ಮೇಲ್ ಬಂದಿದೆ.

ADVERTISEMENT

ಶ್ವಾನದಳ, ಬಾಂಬ್ ಸ್ಕ್ವಾಡನಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಯಿತು.

ಈ ಬಗ್ಗೆ ತ್ಯಾಗರಾಜ ಅವರು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.