ADVERTISEMENT

ವೈದ್ಯಕೀಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 14:35 IST
Last Updated 18 ಜನವರಿ 2021, 14:35 IST
ಬೆಳಗಾವಿಯ ಚಿನ್ನಮ್ಮ ಹಿರೇಮಠ ವೃದ್ಧಾಶ್ರಮದಲ್ಲಿ ಬೈಲಹೊಂಗಲದ ಡಾ.ರಾಮಣ್ಣವರ ಚಾರಿಟಬಲ್ ಟ್ರಸ್ಟ್ ಹಾಗೂ ಮಹಾಂತ ಟ್ರೇಡರ್ಸ್‌ನಿಂದ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪುಸ್ತಕಗಳನ್ನು ವಿತರಿಸಲಾಯಿತು
ಬೆಳಗಾವಿಯ ಚಿನ್ನಮ್ಮ ಹಿರೇಮಠ ವೃದ್ಧಾಶ್ರಮದಲ್ಲಿ ಬೈಲಹೊಂಗಲದ ಡಾ.ರಾಮಣ್ಣವರ ಚಾರಿಟಬಲ್ ಟ್ರಸ್ಟ್ ಹಾಗೂ ಮಹಾಂತ ಟ್ರೇಡರ್ಸ್‌ನಿಂದ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪುಸ್ತಕಗಳನ್ನು ವಿತರಿಸಲಾಯಿತು   

ಬೆಳಗಾವಿ: ‘ದೀನ–ದುರ್ಬಲರ ಸೇವೆ ಪರಮಾತ್ಮನ ಸೇವೆ. ಅದರಲ್ಲೇ ದೇವರನ್ನು ಕಾಣಬೇಕು’ ಎಂದು ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ತಿಳಿಸಿದರು.

ನಗರದ ದೇವರಾಜ ಅರಸು ಬಡಾವಣೆಯ ಚಿನ್ನಮ್ಮ ಹಿರೇಮಠ ವೃದ್ಧಾಶ್ರಮದ ಸಭಾಂಗಣದಲ್ಲಿ ಬೈಲಹೊಂಗಲದ ಡಾ.ರಾಮಣ್ಣವರ ಚಾರಿಟಬಲ್ ಟ್ರಸ್ಟ್ ಹಾಗೂ ಮಹಾಂತ ಟ್ರೇಡರ್ಸ್‌ ವತಿಯಿಂದ ವೈದ್ಯಕೀಯ ಕೋರ್ಸ್‌ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸನ್ಮಾನ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಕಲಿಕಾ ಅವಧಿಯಲ್ಲಿ ಉತ್ತಮ ಅಭ್ಯಾಸ ರೂಢಿಸಿಕೊಂಡು ಮುಂಬರುವ ದಿನಗಳಲ್ಲಿ ಯಶಸ್ವಿ ವೈದ್ಯರಾಗಿ ಸಮಾಜಮುಖಿ ಚಟುಚಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.

ADVERTISEMENT

ಕಾರಂಜಿಮಠದ ಶಿವಯೋಗಿ ದೇವರು, ಮಹಾಂತ ಟ್ರೇಡರ್ಸ್‌ ಮಾಲೀಕ ಮಹಾಂತೇಶ ಶೀಲವಂತರ, ಡಾ.ರಾಮಣ್ಣವರ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷೆ ಡಾ.ಸುಶೀಲಾದೇವಿ ರಾಮಣ್ಣವರ, ಮಹೇಶ ಕೋಟಗಿ, ಬಸಪ್ಪ ಮೋಕಾಶಿ ಸಿಬಿಎಸ್ ಪಬ್ಲಿಕೇಷನ್‌ನ ಸುಜೀತ ಮರಬದ ಇದ್ದರು.

ಎಂ.ಎಸ್. ಚೌಗಲಾ ಮಾತನಾಡಿದರು. ಡಾ.ರಾಮಣ್ಣವರ ಚಾರಿಟಬಲ್ ಟ್ರಸ್ಟ್‌ ಕಾರ್ಯದರ್ಶಿ ಡಾ.ಮಹಾಂತೇಶ ರಾಮಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಯಶ್ರೀ ಬಂಡಿವಡ್ಡರ ಪ್ರಾರ್ಥಿಸಿದರು. ಎಂ.ಎಂ. ಗಡಗಲಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.