ರಾಮದುರ್ಗ: ಪಟ್ಟಣದಲ್ಲಿರುವ ಎಲ್ಲ ವ್ಯಾಪಾರಿ ಮಳಿಗೆಗಳಿಗೆ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು ಎಂದು ಕರವೇ ಕಾರ್ಯಕರ್ತರು ಉಪ ತಹಶೀಲ್ದಾರ್ ಸಂಜಯ ಕಾತೇದಾರ ಅವರಿಗೆ, ಪುರಸಭೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
‘ರಾಮದುರ್ಗ ಪುರಸಭೆ ವ್ಯಾಪ್ತಿಯ ಎಲ್ಲ ಅಂಗಡಿಗಳ ನಾಮಫಲಕದಲ್ಲಿ ಸರ್ಕಾರದ ಆದೇಶದನ್ವಯ ಶೇ 60ರಷ್ಟು ಕನ್ನಡ ಬಳಸಲು ಸೂಚಿಸಲಾಗಿದೆ. ಆದರೂ ಸಾಕಷ್ಟು ಕಡೆಗಳಲ್ಲಿ ಕನ್ನಡೇತರ ನಾಮಫಲಕಗಳು ಇವೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣದ) ಕಾರ್ಯಕರ್ತರು ಕಳವಳ ವ್ಯಕ್ತಪಡಿಸಿದರು.
‘ಒಂದು ವಾರದೊಳಗೆ ಅನುಷ್ಠಾನಕ್ಕೆ ತರದಿದ್ದರೆ ಕನ್ನಡೇತರ ನಾಮಫಲಕಗಳಿಗೆ ಮಸಿ ಬಳಿಯಲಾಗುವುದು. ಫಲಕಗಳನ್ನು ತೆರವುಗೊಳಿಸಲಾಗುವುದು. ಅಲ್ಲಿ ಆಗುವ ಅನಾಹುತಗಳಿಗೆ ನಾವು ಜವಾಬ್ದಾರರಲ್ಲ’ ಎಂದು ಎಚ್ಚರಿಸಿದರು.
ಕರವೇ ರಾಮದುರ್ಗ ತಾಲ್ಲೂಕು ಘಟಕದ ಅಧ್ಯಕ್ಷ ವಿಜಯಕುಮಾರ್ ರಾಠೋಡ, ಪದಾಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.