ನಾಗರಮುನ್ನೋಳಿ (ಬೆಳಗಾವಿ ಜಿಲ್ಲೆ): ಚಿಕ್ಕೋಡಿ ತಾಲ್ಲೂಕಿನ ನಾಗರಮುನ್ನೋಳಿ ಸಮೀಪದ ಬೆಳಕೂಡ ಗೇಟ್ ಹತ್ತಿರ ನಿಪ್ಪಾಣಿ– ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಕಾರು ಮತ್ತು ಗೂಡ್ಸ್ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎರಡೂ ವಾಹನಗಳಲ್ಲಿದ್ದ ನಾಲ್ವರಿಗೆ ಗಾಯಗಳಾಗಿವೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ರಾಕೇಶ ವಾಟಕರ್ (23) ಹಾಗೂ ಸೌರಭ ಕುಲಕರ್ಣೀ (22) ಮೃತಪಟ್ಟವರು.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಮಾಹಿತಿ ಸಿಗಬೇಕಿದೆ.
ಘಟನಾ ಸ್ಥಳಕ್ಕೆ ಚಿಕ್ಕೋಡಿ ಡಿವೈಎಸ್ಪಿ ಗೋಪಾಲ ಕೃಷ್ಣ ಗೌಡರ, ಸಿಪಿಐ ವಿಶ್ವನಾಥ ಚೌಗಲಾ, ಪಿಎಸ್ಐ ರೂಪಾಲಿ ಭೇಟಿ ನೀಡಿದರು. ಚಿಕ್ಕೋಡಿ ಸಂಚಾರ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.