ADVERTISEMENT

ಲೋಕಸಭಾ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ: ಈರಣ್ಣಾ ಕಡಾಡಿ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2024, 15:05 IST
Last Updated 4 ಫೆಬ್ರುವರಿ 2024, 15:05 IST
ಚಿಕ್ಕೋಡಿ ತಾಲ್ಲೂಕಿನ ಜಾಗನೂರು ಗ್ರಾಮದ ಹನುಮಾನ ಮಂದಿರದ ಆವರಣದಲ್ಲಿ ರಾಜ್ಯಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಪೇವರ್ಸ್ ಅಳವಡಿಕೆ ಕಾಮಗಾರಿಗೆ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಚಾಲನೆ ನೀಡಿದರು
ಚಿಕ್ಕೋಡಿ ತಾಲ್ಲೂಕಿನ ಜಾಗನೂರು ಗ್ರಾಮದ ಹನುಮಾನ ಮಂದಿರದ ಆವರಣದಲ್ಲಿ ರಾಜ್ಯಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಪೇವರ್ಸ್ ಅಳವಡಿಕೆ ಕಾಮಗಾರಿಗೆ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಚಾಲನೆ ನೀಡಿದರು   

ಚಿಕ್ಕೋಡಿ: ‘ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಊಹಿಸಲಾಗದ ಬದಲಾವಣೆಗಳು ಆಗಲಿವೆ. ಕರ್ನಾಟಕದಲ್ಲಿ ಸಂಚಲನವೇ ಸೃಷ್ಟಿಯಾಗಲಿದೆ’ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಜಾಗನೂರು ಗ್ರಾಮದ ಹನುಮಾನ ಮಂದಿರದ ಆವರಣದಲ್ಲಿ ರಾಜ್ಯಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಪೇವರ್ಸ್ ಅಳವಡಿಕೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯನ್ನು ಬಿಟ್ಟು ಹೋದವರು ಮರಳಿ ಮಾತೃ ಪಕ್ಷಕ್ಕೆ ಬರಲಿದ್ದಾರೆ. ಅವರನ್ನು ಕರೆ ತರುವ ಪ್ರಯತ್ನವನ್ನು ಮಾಡುತ್ತಿದ್ದೇವೆ. ಚಿಕ್ಕೋಡಿ ಹಾಗೂ ಬೆಳಗಾವಿ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಎರಡೂ ಕಡೆ ಬಿಜೆಪಿ ಗೆಲುವು ಸಾಧಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಾಂತೇಶ ಶಿರಗೂರ, ಪಿಕೆಪಿಎಸ್ ಅಧ್ಯಕ್ಷ ಹನುಮಂತ ರಬಕವಿ, ಲಕ್ಷ್ಮಣ ಮಂಗಿ, ಮಾರುತಿ ಹನುಮನ್ನವರ, ಮುತ್ತೆಪ್ಪ ಹನುಮನ್ನವರ, ಮಲ್ಲೇಶ ಹನುಮಂತಗೋಳ, ಮಾರುತಿ ಪೆಡ್ಡಾರೆ, ಸಿದ್ದು ಖಿಂಡಿ, ವಿಠ್ಠಲ ಚಿಂಚಲಿ, ಗುಂಡು ಪೆಡ್ಡಾರಿ, ಸಲ್ಮಾನ್ ನಾಯಕವಾಡಿ, ಬೀರಪ್ಪ ಡೋಣಿ, ಲಕ್ಷ್ಮಣ ಹನುಮನ್ನವರ, ಭೀಮಪ್ಪ ಹಂಜಾನಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT