ADVERTISEMENT

ಚಿಕ್ಕೋಡಿ | ₹37 ಲಕ್ಷ ಮೌಲ್ಯದ ಸ್ವತ್ತು ಜಪ್ತಿ: 7 ಜನ ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2024, 16:04 IST
Last Updated 13 ನವೆಂಬರ್ 2024, 16:04 IST
ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಕಳ್ಳತನವಾಗಿದ್ದ ಲಾರಿ,ಬೈಕ್,ಟೈರ್ ಸೇರಿದಂತೆ ₹ 37.40 ಲಕ್ಷ ಮೌಲ್ಯದ ಸ್ವತ್ತುಗಳನ್ನು ಚಿಕ್ಕೋಡಿ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ
ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಕಳ್ಳತನವಾಗಿದ್ದ ಲಾರಿ,ಬೈಕ್,ಟೈರ್ ಸೇರಿದಂತೆ ₹ 37.40 ಲಕ್ಷ ಮೌಲ್ಯದ ಸ್ವತ್ತುಗಳನ್ನು ಚಿಕ್ಕೋಡಿ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ   

ಚಿಕ್ಕೋಡಿ: ತಾಲ್ಲೂಕಿನ ಕರೋಶಿ ಗ್ರಾಮದಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದ ಲಾರಿ, ಬೈಕ್, ಡಿಸ್ಕ್ ಸಮೇತ 8 ಟೈರ್ ಸೇರಿದಂತೆ ₹ 37.40 ಲಕ್ಷ ಮೌಲ್ಯದ ಸ್ವತ್ತುಗಳನ್ನು ಚಿಕ್ಕೋಡಿ ಪೊಲೀಸರು ವಶಪಡಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಏಳು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಘಟನೆ ನಡೆದ ಒಂದು ತಿಂಗಳೊಳಗೆ ಆರೋಪಿಗಳನ್ನು ಬಂಧಿಸಿ, ಸ್ವತ್ತು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಚಿಕ್ಕೋಡಿ ಠಾಣೆ ಪಿಎಸ್‍ಐ ಬಸಗೌಡ ನೇರ್ಲಿ ಹಾಗೂ ಸಿಬ್ಬಂದಿಗೆ ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ, ಹೆಚ್ಚುವರಿ ಎಸ್ಪಿ ರಾಮಗೊಂಡ ಬಸರಗಿ, ಚಿಕ್ಕೋಡಿ ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ ಚೌಗುಲೆ ಮಾರ್ಗದರ್ಶನ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT