ADVERTISEMENT

ಫಾದರ್ ಸ್ಟ್ಯಾನ್ ಸ್ವಾಮಿ ಬಿಡುಗಡೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 11:38 IST
Last Updated 17 ನವೆಂಬರ್ 2020, 11:38 IST
ಜಾರ್ಖಂಡ್‌ನ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿರುವುದನ್ನು ಖಂಡಿಸಿ ಮತ್ತು ಅವರ ಬಿಡುಗಡೆಗೆ ಆಗ್ರಹಿಸಿ ಕ್ರೈಸ್ತ ಸಮುದಾಯದವರು ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು
ಜಾರ್ಖಂಡ್‌ನ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿರುವುದನ್ನು ಖಂಡಿಸಿ ಮತ್ತು ಅವರ ಬಿಡುಗಡೆಗೆ ಆಗ್ರಹಿಸಿ ಕ್ರೈಸ್ತ ಸಮುದಾಯದವರು ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ‘ಜಾರ್ಖಂಡ್‌ನ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿರುವುದನ್ನು ಖಂಡಿಸಿ ಮತ್ತು ಅವರ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿ ಕ್ರೈಸ್ತ ಸಮುದಾಯದವರು ಇಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ರಾಣಿ ಚನ್ನಮ್ಮ ವೃತ್ತದಿಂದ ಮೌನ ಮೆರವಣಿಗೆ ನಡೆಸಿದ ಅವರು, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.

‘ಭೀಮಾಕೋರೆಗಾಂವ್‌ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟ್ಯಾನ್ ಸ್ವಾಮಿ ಅವರ ಮೇಲೆ ಸುಳ್ಳು ಆರೋಪ ಹೊರಿಸಿ ಬಂಧಿಸಲಾಗಿದೆ. ಅವರು ಪ್ರಕೃತಿ ಪ್ರೇಮಿಯಾಗಿದ್ದು, ಜಾರ್ಖಂಡ್‌ನಲ್ಲಿ ಆದಿವಾಸಿಗಳ ಪರ ನಾಲ್ಕು ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಇಳಿವಯಸ್ಸಿನಲ್ಲಿ ಅವರನ್ನು ಬಂಧಿಸಿರುವುದು ಖಂಡನೀಯ’ ಎಂದರು.

ADVERTISEMENT

‘ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಬೇಕಾದಲ್ಲಿ ಸೂಕ್ತ ಚಿಕಿತ್ಸೆ ಪಡೆಯಲು ಅವಕಾಶ ಕೊಡಬೇಕು. ಭೀಮಾಕೋರೆಗಾಂವದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಬಂಧಿಸಲಾಗಿರುವ 16 ಮಂದಿ ಮಾನವ ಹಕ್ಕು ಪರ ಕಾರ್ಯಕರ್ತರನ್ನು ಬಂಧ ಮುಕ್ತಗೊಳಿಸಬೇಕು. ಯುಎಪಿಎ ಕಾಯ್ದೆ ರದ್ದುಪಡಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.