ADVERTISEMENT

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಎಂಎಸ್‌ಪಿ ಜಾರಿಗೊಳಿಸುತ್ತೇವೆ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2024, 18:36 IST
Last Updated 6 ಮಾರ್ಚ್ 2024, 18:36 IST
   

ಬೆಳಗಾವಿ: ‘ದೇಶದ ರೈತರು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದ್ದಾರೆ. ಇಲ್ಲದಿದ್ದರೆ, ನಾವು ಬೇರೆ ದೇಶಗಳ ಬಳಿ ಕೈಚಾಚಬೇಕಿತ್ತು. ಈ ಸಲ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ತಂದರೆ, ಕೃಷಿಕರು ಬೆಳೆದ ಎಲ್ಲ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಒದಗಿಸುವ ಕಾಯ್ದೆ ಜಾರಿಗೆ ತರುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಇಲ್ಲಿನ ಸುವರ್ಣ ವಿಧಾನಸೌಧ ಆವರಣದಲ್ಲಿ ಬುಧವಾರ ಬೆಳಗಾವಿ ವಿಭಾಗದ ರೈತ ಫಲಾನುಭವಿಗಳಿಗೆ ವಿವಿಧ ಕೃಷಿ ಸಲಕರಣೆಗಳನ್ನು ವಿತರಿಸಿ ಅವರು ಮಾತನಾಡಿದರು.

‘ಎಂಎಸ್‌ಪಿ ಕಾಯ್ದೆ ಜಾರಿಗೆ ಒತ್ತಾಯಿಸಿ, ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತಿಲ್ಲ. ರೈತರಿಗೆ ಎಂಎಸ್‌ಪಿ ಜಾರಿಗೊಳಿಸುವುದು ಸರ್ಕಾರದ ಕರ್ತವ್ಯ. ಇದರಿಂದ ಅವರು ನಷ್ಟ ಅನುಭವಿಸುವುದು ತಪ್ಪುತ್ತದೆ. ಕೇಂದ್ರದಲ್ಲಿ ನಾವು ಅಧಿಕಾರ ಹಿಡಿದರೆ, ಇದನ್ನು ಜಾರಿಗೊಳಿಸುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.