ಗೋಕಾಕ: ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಮಹಾಂತೇಶ ಮನ್ನಿಕೇರಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಭಾನುವಾರ ಆದೇಶ ಹೊರಡಿಸಿದ್ದಾರೆ.
‘ಪೊಲೀಸರೇ ಹೆಲ್ಮೆಟ್ ಧರಿಸುವುದಿಲ್ಲ ಎನ್ನುವ ಆರೋಪ ಸಾರ್ವಜನಿಕರಿಂದ ಕೇಳಿಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.