ADVERTISEMENT

ಸಂವಿಧಾನಕ್ಕೆ ಎಲ್ಲರೂ ಗೌರವ ನೀಡಿ: ಶಾಸಕ ಮಹಾಂತೇಶ ಕೌಜಲಗಿ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2024, 15:39 IST
Last Updated 26 ನವೆಂಬರ್ 2024, 15:39 IST
ಬೈಲಹೊಂಗಲದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರು, ಅಧಿಕಾರಿಗಳು ಪ್ರತಿಜ್ಞಾವಿಧಿ ಓದಿದರು
ಬೈಲಹೊಂಗಲದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರು, ಅಧಿಕಾರಿಗಳು ಪ್ರತಿಜ್ಞಾವಿಧಿ ಓದಿದರು    

ಬೈಲಹೊಂಗಲ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ ಅವರ ಕೊಡುಗೆ ಅಪಾರ’ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ಪಟ್ಟಣದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಮಂಗಳವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ ಅವರ ಪುತ್ಥಳಿಗೆ ಗೌರವ ಸಲ್ಲಿಸಿ ಅವರು ಮಾತನಾಡಿದರು.

‘ಸಂವಿಧಾನ ನೀಡಿದ ಹಕ್ಕನ್ನು ಪ್ರತಿಯೊಬ್ಬರು ಸದ್ಭಳಕೆ ಮಾಡಿಕೊಳ್ಳಬೇಕು. ಸಂವಿಧಾನಕ್ಕೆ ಎಲ್ಲರೂ ಗೌರವ ನೀಡಬೇಕು’ ಎಂದರು.

ADVERTISEMENT

ಉಪವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪುರ, ತಹಶೀಲ್ದಾರ್‌ ಹನುಮಂತ ಶಿರಹಟ್ಟಿ, ಸಿಪಿಐ ಪಂಚಾಕ್ಷರಿ ಸಾಲಿಮಠ, ಪುರಸಭೆ ಮುಖ್ಯಾಧಿಕಾರಿ ವೀರೇಶ ಹಸಬಿ, ರಮೇಶ ಹಂಚಿನಮನಿ, ಸಂಜು ಮುರಗೋಡ, ಬಾಬುಸಾಬ ಸುತಗಟ್ಟಿ, ಡಾ.ಮಹಾಂತೇಶ ಕಳ್ಳಿಬಡ್ಡಿ, ಪುರಸಭೆ ಮ್ಯಾನೇಜರ್ ಎಂ.ಐ. ಕುಟ್ರೆ, ಕಂದಾಯ ನಿರೀಕ್ಷಕ ಬಸವರಾಜ ಬೋರಗಲ್, ತಾಲ್ಲೂಕು ಪಂಚಾಯಿತಿ ಇಒ ಮಲ್ಲಿಕಾರ್ಜುನ ಉಳ್ಳೇಗಡ್ಡಿ ಪ್ರತಿಜ್ಞಾ ವಿಧಿ ಬೋಧಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.