ADVERTISEMENT

ಸಂವಿಧಾನದ ಬಗ್ಗೆ ಅರಿವು ಮೂಡಿಸಿ: ಶಾಸಕ ಆಸಿಫ್ ಸೇಠ್

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2024, 15:41 IST
Last Updated 26 ನವೆಂಬರ್ 2024, 15:41 IST
ಬೆಳಗಾವಿಯ ಅಂಬೇಡ್ಕರ್‌ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಶಾಸಕ ಆಸಿಫ್‌ ಸೇಠ್‌, ಮೇಯರ್‌ ಸವಿತಾ ಕಾಂಬಳೆ ಮತ್ತಿತರರು ಪಾಲ್ಗೊಂಡಿದ್ದರು
ಬೆಳಗಾವಿಯ ಅಂಬೇಡ್ಕರ್‌ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಶಾಸಕ ಆಸಿಫ್‌ ಸೇಠ್‌, ಮೇಯರ್‌ ಸವಿತಾ ಕಾಂಬಳೆ ಮತ್ತಿತರರು ಪಾಲ್ಗೊಂಡಿದ್ದರು   

ಬೆಳಗಾವಿ: ‘ಸಂವಿಧಾನದಿಂದಾಗಿ ಎಲ್ಲರಿಗೂ ಸಮಾನ ಶಿಕ್ಷಣ ಮತ್ತು ಸೌಲಭ್ಯ ಸಿಗುತ್ತಿವೆ. ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಬೇಕು’ ಎಂದು ಶಾಸಕ ಆಸಿಫ್ ಸೇಠ್ ಹೇಳಿದರು.

ಇಲ್ಲಿಯ ಅಂಬೇಡ್ಕರ್ ಉದ್ಯಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಂಬೈ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಕೆ.ಡಿ. ಮಂತ್ರೇಶಿ ಮಾತನಾಡಿದರು.

ADVERTISEMENT

ಮೇಯರ್‌ ಸವಿತಾ ಕಾಂಬಳೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಪಾಲಿಕೆ ಆಯುಕ್ತೆ ಬಿ. ಶುಭ, ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಸಮಾಜಕಲ್ಯಾಣ ಇಲಾಖೆಯ ಜಂಟಿನಿರ್ದೇಶಕ ರಾಮನಗೌಡ ಕನ್ನೋಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಬಸವರಾಜ ಕುರಿಹುಲಿ, ಶಿವಾಜಿ ಕಾರ್ಲೇಕರ್‌ ಇದ್ದರು.
ಸಂವಿಧಾನ ದಿನದ ಪ್ರಯುಕ್ತ ಏರ್ಪಡಿಸಿದ್ದ ಜಿಲ್ಲಾಮಟ್ಟದ ಪ್ರಬಂಧ, ಭಾಷಣ ಹಾಗೂ ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.