ADVERTISEMENT

‘ಭಗವದ್ಗೀತೆ ಅಭಿಯಾನ ಯಶಸ್ಸಿಗೆ ಸಹಕಾರ’

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2023, 14:14 IST
Last Updated 22 ನವೆಂಬರ್ 2023, 14:14 IST
ಬೆಳಗಾವಿಯಲ್ಲಿ ಮಂಗಳವಾರ ಭಗವದ್ಗೀತೆ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರು ಪ್ರಭಾಕರ ಕೋರೆ ಅವರನ್ನು ಸನ್ಮಾನಿಸಿದರು
ಬೆಳಗಾವಿಯಲ್ಲಿ ಮಂಗಳವಾರ ಭಗವದ್ಗೀತೆ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರು ಪ್ರಭಾಕರ ಕೋರೆ ಅವರನ್ನು ಸನ್ಮಾನಿಸಿದರು   

ಬೆಳಗಾವಿ: ‘ಬೆಳಗಾವಿ ಕೇಂದ್ರಿತವಾಗಿ ಆರಂಭವಾದ ಭಗವದ್ಗೀತೆ ಅಭಿಯಾನವನ್ನು ಯಶಸ್ವಿ ಮಾಡಲಾಗುವುದು’ ಎಂದು ಅಭಿಯಾನದ ರಾಜ್ಯ ಸಮಿತಿಯ ಗೌರವಾಧ್ಯಕ್ಷ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ 17 ವರ್ಷಗಳಿಂದ ರಾಜ್ಯದಾದ್ಯಂತ ಭಗವದ್ಗೀತೆ ಅಭಿಯಾನ ನಡೆಸುತ್ತಿರುವ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳೊಂದಿಗೆ ಮಂಗಳವಾರ ಸಂಜೆ, ಚರ್ಚಿಸಿದ ಅವರು, ‘ಅಭಿಯಾನ ಯಾವುದೇ ವಿಘ್ನಗಳಿಲ್ಲದೆ ಯಶಸ್ವಿಯಾಗಿ ನಡೆಯಲಿದೆ. ಇದಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಸ್ವಾಮೀಜಿ ಮಾರ್ಗದರ್ಶನದಂತೆ ಶ್ಲೋಕ ಪಠಣ, ಪ್ರವಚನ, ವಿಚಾರಸಂಕಿರಣ, ಗೀತಾ ಸಮನ್ವಯ ಕಾರ್ಯಕ್ರಮ ಹಾಗೂ ಮಹಾಸಮರ್ಪಣೆ ಸೇರಿದಂತೆ ಎಲ್ಲ ಕಾರ್ಯಕ್ರಮಗಳನ್ನು ಸುವ್ಯವಸ್ಥಿತವಾಗಿ ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.

‘ಭಗವದ್ಗೀತೆ ಅಭಿಯಾನದ ಯಶಸ್ಸಿಗೆ ನಮ್ಮ ಸಂಪೂರ್ಣ ತಂಡ ಕೆಲಸ ಮಾಡಲಿದೆ. ಜಿಲ್ಲೆಯಾದ್ಯಂತ ಶ್ಲೋಕ ಕೇಂದ್ರಗಳನ್ನು ಆರಂಭಿಸಲಾಗುವುದು. ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ಸಿಗುತ್ತಿದೆ’ ಎಂದುತಿಳಿಸಿದರು.

ADVERTISEMENT

ಭಗವದ್ಗೀತೆ ಅಭಿಯಾನ ಸಮಿತಿ ಕಾರ್ಯಾಧ್ಯಕ್ಷ ಪರಮೇಶ್ವರ ಹೆಗಡೆ, ಕಾರ್ಯದರ್ಶಿ ಎಂ.ಕೆ.ಹೆಗಡೆ, ಸಂಚಾಲಕ ಸುಬ್ರಹ್ಮಣ್ಯ ಭಟ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.