ADVERTISEMENT

₹74.87 ಕೋಟಿ ಅವ್ಯವಹಾರ ಆರೋಪ: 14 ಸಿಬ್ಬಂದಿ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 6:56 IST
Last Updated 19 ಸೆಪ್ಟೆಂಬರ್ 2024, 6:56 IST

ಗೋಕಾಕ: ಇಲ್ಲಿನ ಮಹಾಲಕ್ಷ್ಮಿ ಅರ್ಬನ್ ಕೋ ಆಪ್ ಕ್ರೆಡಿಟ್ ಬ್ಯಾಂಕಿನಲ್ಲಿ ₹74.87 ಕೋಟಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ, ಬ್ಯಾಂಕಿನ 14 ಸಿಬ್ಬಂದಿ ವಿರುದ್ಧ ಅಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ಶಹರ ಪೊಲೀಸರಿಗೆ ದೂರು ನೀಡಿದ್ದಾರೆ.

ಸಾಗರ ಹನಮಂತ ಸಬಕಾಳೆ, ವಿಶ್ವನಾಥ ಅಶೋಕ ಬಾಗಡೆ, ಸಂಬಾಜಿ ಮಲ್ಲಪ್ಪ ಘೋರ್ಪಡೆ, ಸಿದ್ದಪ್ಪ ಸದಾಶಿವ ಪವಾರ (ವ್ಯವಸ್ಥಾಪಕ), ದಯಾನಂದ ಶಿವಾಜಿ ಉಪ್ಪಿನ, ಸಂಜನಾ ಸಾಗರ ಸಬಕಾಳೆ, ಮಾಲವ್ವ ಹಣಮಂತ ಸಬಕಾಲೆ, ಗೌರವ್ವ ಬಾಳಪ್ಪ ಹವಾಲ್ದಾರ, ಚಂದ್ರವ್ವ ಹವಾಲ್ದಾರ, ಮಾಯವ್ವ ಮಾಯಪ್ಪ ಜಾಧವ, ಪರಸಪ್ಪ ಯಲ್ಲಪ್ಪ ಮಾಲೋಜಿ, ರಾಧಾ ಪರಸಪ್ಪ ಮಾಲೋಜಿ, ಸಂದೀಪ ಬಸವರಾಜ ಮರಾಠೆ ಮತ್ತು ಕಿರಣ ಸಕಾರಾಮ ಸುಪಲಿ ಮತ್ತಿತರರ ವಿರುದ್ಧ ದೂರು ದಾಖಲಾಗಿದೆ.

ಈ ಗೊಂದಲದ ಕಾರಣ ತಮ್ಮ ಠೇವಣಿ ಮೊತ್ತ ವಾಪಸ್‌ ನೀಡುವಂತೆ ಜನ ಅ‍ಪಾರ ಸಂಖ್ಯೆಯಲ್ಲಿ ಬ್ಯಾಂಕ್‌ ಎದುರು ಜಮಾಯಿಸಿದರು. ಕೆಲಕಾಲ ತ್ವೇಷಮಯ ವಾತಾವರಣ ಉಂಟಾಯಿತು. ಪೊಲೀಸರು ಬಿಗಿ ಬಂದೋಬಸ್ತ್‌ ಏರ್ಪಡಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.