ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಪಟ್ಟಣದ ಹೊರವಲಯದ ಬಸವೇಶ್ವರ ಆಶ್ರಯ ಕಾಲೂನಿಯಲ್ಲಿ ಭಾನುವಾರ ರಾತ್ರಿ, ವೈಯುಕ್ತಿಕ ದ್ವೇಷದ ಕಾರಣ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಬಸವೇಶ್ವರ ಆಶ್ರಯ ಕಾಲೂನಿ ನಿವಾಸಿ ರವಿ ತಿಮ್ಮಣ್ಣವರ (23) ಕೊಲೆಯಾದವರು. ಸುಮಾರು 10 ರಿಂದ 13 ಯುವಕರ ಗುಂಪು ಯುವಕನ ಮೇಲೆ ಚಾಕುವಿನಿಂದ ದಾಳಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಸ್ಥಳಕ್ಕೆ ಡಿವೈಎಸ್ಪಿ ರವಿ ನಾಯ್ಕ, ಸಿಪಿಐ ಪಂಚಾಕ್ಷರಿ ಸಾಲಿಮಠ ಭೇಟಿ ನೀಡಿದ್ದಾರೆ. ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.