ADVERTISEMENT

ಬೆಳಗಾವಿ: ಮತ ಎಣಿಕೆ ಕೇಂದ್ರದ ಸಿದ್ಧತೆ ಪರಿಶೀಲಿಸಿದ ಡಿ.ಸಿ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2021, 8:27 IST
Last Updated 1 ಏಪ್ರಿಲ್ 2021, 8:27 IST
ಬೆಳಗಾವಿಯ ಆರ್‌ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ಕೇಂದ್ರದ ಸಿದ್ಧತೆಯನ್ನು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ. ಹರೀಶ್‌ಕುಮಾರ್‌ ಗುರುವಾರ ವೀಕ್ಷಿಸಿದರು
ಬೆಳಗಾವಿಯ ಆರ್‌ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ಕೇಂದ್ರದ ಸಿದ್ಧತೆಯನ್ನು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ. ಹರೀಶ್‌ಕುಮಾರ್‌ ಗುರುವಾರ ವೀಕ್ಷಿಸಿದರು   

ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ನಗರದ ಆರ್.ಪಿ.ಡಿ. ಕಾಲೇಜಿನಲ್ಲಿ ಸ್ಟ್ರಾಂಗ್ ರೂಮ್ ನಿರ್ಮಾಣ ಹಾಗೂ ಮತ ಎಣಿಕೆ ಕೇಂದ್ರಗಳ ಸಿದ್ಧತೆಗಳನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಗುರುವಾರ ಪರಿಶೀಲಿಸಿದರು.

ಸ್ಟ್ರಾಂಗ್ ರೂಂ ನಿರ್ಮಾಣ ಕಾರ್ಯ ಸೇರಿದಂತೆ ತಯಾರಿಯ ಮಾಹಿತಿ ಪಡೆದರು. ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಸ್ಟ್ರಾಂಗ್ ರೂಂ ನಿರ್ಮಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಿಗದಿತ ಸಮಯದೊಳಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು. ಮತ ಎಣಿಕೆ ದಿನ ಅಗತ್ಯವಿರುವ ಸಾಮಗ್ರಿಗಳನ್ನು ಕೂಡ ಮುಂಚಿತವಾಗಿಯೇ ಸಜ್ಜಾಗಿರಿಸಿಕೊಳ್ಳಬೇಕು ಎಂದು ತಿಳಿಸಿದರು.

‘ಭದ್ರತಾ ವ್ಯವಸ್ಥೆ, ಬ್ಯಾರಿಕೇಡಿಂಗ್, ಚುನಾವಣಾ ವೀಕ್ಷಕರ ವಿಶೇಷ ಕೊಠಡಿಗಳು, ಮಾಧ್ಯಮ ಕೇಂದ್ರ ಸೇರಿದಂತೆ ಪ್ರತಿಯೊಂದು ವ್ಯವಸ್ಥೆಯನ್ನು ಅಚ್ಚುಕಟ್ಟಾಗಿರುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು’ ಎಂದರು.

ADVERTISEMENT

ಲೋಕೋಪಯೋಗಿ ಇಲಾಖೆಯ ಎಇ ಸಂಜೀವ್‌ಕುಮಾರ್ ಹುಲಕಾಯಿ ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ್, ಉಪ ವಿಭಾಗಾಧಿಕಾರಿ ಅಶೋಕ ತೇಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.