ಬೆಳಗಾವಿ: ‘ಗಡಿಭಾಗದ ಜನರಲ್ಲಿ ಭಾಷಾ ವೈಷಮ್ಯದ ಬೀಜ ಬಿತ್ತುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು (ಎಂಇಎಸ್) ರಾಜ್ಯದಲ್ಲಿ ನಿಷೇಧಿಸಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಒತ್ತಾಯಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಹಾರಾಷ್ಟ್ರದ ವಿವಿಧ ಪ್ರದೇಶಗಳಲ್ಲಿ ಕನ್ನಡಿಗರೂ ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದಾರೆ. ಅಲ್ಲಿ ಭಾಷಾ ಅಲ್ಪಸಂಖ್ಯಾತರಾದ ಕನ್ನಡಿಗರಿಗೆ ಮಹಾರಾಷ್ಟ್ರ ಸರ್ಕಾರ ಯಾವುದೇ ಸೌಲಭ್ಯ ಕಲ್ಪಿಸಿಲ್ಲ. ಆದರೆ, ಬೆಳಗಾವಿಯಲ್ಲಿ ತಮಗೆ ಮರಾಠಿಯಲ್ಲಿ ಸರ್ಕಾರಿ ದಾಖಲೆಗಳನ್ನು ನೀಡುವಂತೆ ಎಂಇಎಸ್‌ನವರು ಪ್ರತಿಭಟನೆ ನಡೆಸುತ್ತಿರುವುದು ಎಷ್ಟರಮಟ್ಟಿಗೆ ಸರಿ?’ ಎಂದು ಪ್ರಶ್ನಿಸಿದ್ದಾರೆ.
‘ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಎಂಇಎಸ್ ಮರಾಠಿ ಭಾಷಿಗರನ್ನು ಪ್ರಚೋದಿಸುತ್ತಿದೆ. ಒಂದಿಲ್ಲೊಂದು ವಿವಾದ ಹುಟ್ಟುಹಾಕುತ್ತಿದೆ. ಸರ್ಕಾರ ತಕ್ಷಣ ಇದಕ್ಕೆ ಕಡಿವಾಣ ಹಾಕಿ, ಗಡಿ ಕನ್ನಡಿಗರಲ್ಲಿ ಸ್ಥೈರ್ಯ ತುಂಬಬೇಕು. ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ ಎಂಬುದನ್ನು ಸಾರಬೇಕು’ ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.