ADVERTISEMENT

ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಮನವಿ

​ಪ್ರಜಾವಾಣಿ ವಾರ್ತೆ
Published 17 ಜೂನ್ 2024, 15:51 IST
Last Updated 17 ಜೂನ್ 2024, 15:51 IST
ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯವರು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ  ಮನವಿ ಸಲ್ಲಿಸಿದರು
ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯವರು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ  ಮನವಿ ಸಲ್ಲಿಸಿದರು    

ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನನೆಗುದಿಗೆ ಬಿದ್ದಿರುವ ವಿವಿಧ ರೈಲ್ವೆ ಯೋಜನೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಪಟ್ಟಣದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.

2010-11ರಲ್ಲಿಯೇ ಕರಾಡ-ಕೊಲ್ಹಾಪುರ-ಬೆಳಗಾವಿ ರೈಲ್ವೆ ಮಾರ್ಗ ಹಾಗೂ ಶೇಡಬಾಳ-ಅಥಣಿ-ವಿಜಯಪೂರ ನೂತನ ರೈಲ್ವೆ ಮಾರ್ಗಗಳನ್ನು ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಿ ಶೀಘ್ರ ಪೂರ್ಣಗೊಳಿಸಬೇಕು. ಅಲ್ಲದೇ ಕಳೆದ ಒಂದೂವರೆ ದಶಕದಿಂದ ಕುಂಟುತ್ತಾ ಸಾಗಿರುವ ಕುಡಚಿ-ಬಾಗಲಕೋಟೆ ನೂತನ ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು.

ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ನೀಡಿರುವ ಮನವಿ ಸ್ವೀಕರಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಸಂಸತ್ತಿನಲ್ಲಿ ಈ ಕುರಿತು ಧ್ವನಿ ಎತ್ತಿ ಚಿಕ್ಕೋಡಿ ಕ್ಷೇತ್ರ ವ್ಯಾಪ್ತಿಯ ರೈಲ್ವೆ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದರು.

ADVERTISEMENT

ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಸಂಜು ಬಡಿಗೇರ, ಚಂದ್ರಕಾಂತ ಹುಕ್ಕೇರಿ, ಸಂಜಯ ಪಾಟೀಲ, ಮಾಳಪ್ಪ ಕರೆನ್ನವರ, ಕಾನಪ್ಪ ಬಾಡ, ವಿಠ್ಠಲ ಡಾವಾಳೆ, ರಮೇಶ ಡಂಗೇರ, ಅಮೋಲ ನಾವಿ, ಸಂಜು ಕೇಸ್ತಿಕರ, ದುಂಡಪ್ಪ ಗುರವ, ವಿಶಾಲ ಮೇಕ್ರೆ ಮುಂತಾದವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.