ಬೆಳಗಾವಿ: ‘ಜಗಜ್ಯೋತಿ ಬಸವಣ್ಣನನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಅದನ್ನು ಮಾರ್ಪಡಿಸಿ ‘ನಾಡಿನ ಆರಾಧ್ಯ ದೈವ ಬಸವಣ್ಣ’ ಎಂದು ಮರುಘೋಷಿಸಬೇಕು’ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಒತ್ತಾಯಿಸಿದ್ದಾರೆ.
‘ಹೈಕೋರ್ಟ್‌ನಲ್ಲಿ 2023ರಲ್ಲಿ ಪ್ರಕರಣವೊಂದರ ವಿಚಾರಣೆ ನಡೆಸಿದ ಪೀಠವು ತನ್ನ ತೀರ್ಪಿನಲ್ಲಿ, ‘ಬುದ್ಧ, ಬಸವ, ಅಂಬೇಡ್ಕರ್ ಅವರನ್ನು ದೈವ ಸ್ವರೂಪಿಗಳು ಎಂದು ಪರಿಗಣಿಸಲಾಗಿದೆ. ಸಂವಿಧಾನವು ‘ದೇವರು’ ಎಂಬ ಪದವನ್ನು ಸೂಚಿಸಲು ಬಳಸಿದ ಅರ್ಥವೂ ಇದೇ ಆಗಿದೆಯೆಂದು ಅಭಿಪ್ರಾಯಪಟ್ಟಿತ್ತು’ ಎಂದು ತಿಳಿಸಿದ್ದಾರೆ.
‘ಬಸವಣ್ಣನನ್ನು ‘ನಾಡಿನ ಆರಾಧ್ಯ ದೈವ ಬಸವಣ್ಣ’ ಎಂದು ಮರುಘೋಷಿಸುವಂತೆ ರಾಜ್ಯಪಾಲರು, ಮುಖ್ಯಮಂತ್ರಿ, ಕಾನೂನು ಸಚಿವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಬೇಡಿಕೆ ಈಡೇರದಿದ್ದರೆ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.