ADVERTISEMENT

ಸಂತ್ರಸ್ತರಿಗೆ ಪರಿಹಾರಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 27 ಜನವರಿ 2020, 12:01 IST
Last Updated 27 ಜನವರಿ 2020, 12:01 IST

ಬೆಳಗಾವಿ: ‘ಮೂಡಲಗಿ ತಾಲ್ಲೂಕಿನ ತಿಗಡಿ, ಉದಗಟ್ಟಿ ಗ್ರಾಮದಲ್ಲಿ ನೆರೆ ಪರಿಹಾರ ನೀಡುವಲ್ಲಿ ಅಲ್ಲಿನ ಅಧಿಕಾರಿಗಳು ತಾರತಮ್ಯ ಮಾಡಿದ್ದಾರೆ. ಕೂಡಲೇ ಇದನ್ನು ಸರಿಪಡಿಸಬೇಕು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದುಆಗ್ರಹಿಸಿಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಆಗಸ್ಟ್‌ನಲ್ಲಿ ಬಂದ ಪ್ರವಾಹದಿಂದಾಗಿ ಜನರ ಜೀವನ ತತ್ತರಿಸಿ ಹೋಗಿದೆ. ಆದರೆ ಸಂಕಷ್ಟದಲ್ಲಿರುವ ಅರ್ಹ ಫಲಾನುಭವಿಗಳಿಗೆ ಪರಿಹಾರ ನೀಡುವಲ್ಲಿ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ.ಅರ್ಹ ರೈತರಿಗೆ ಪರಿಹಾರ ನೀಡಿಲ್ಲ. ಇದಕ್ಕೆ ಅಲ್ಲಿನ ಪಿಡಿಒ, ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿ ಕಾರಣವಾಗಿದ್ದಾರೆ’ ಎಂದು ದೂರಿದರು.

‘ಪರಿಹಾರ ತಾರತಮ್ಯ ಕುರಿತು ಈಗಾಗಲೇ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಪ್ರಯೋಜನವಾಗಿಲ್ಲ. ಇನ್ನಾದರೂ ಸ್ಪಂದಿಸದಿದ್ದಲ್ಲಿ ಹೋರಾಟ ತೀವ್ರಗೊಳಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ADVERTISEMENT

ತಾಲ್ಲೂಕು ಘಟಕದ ಅಧ್ಯಕ್ಷ ಶಿವರಡ್ಡಿ ಹುಚರಡ್ಡಿ,ಸಂಜಯ ರಜಪೂತ, ಇರ್ಫಾನ್ ಅತ್ತಾರ, ಯಲ್ಲೇಶ ಬಚಲಪೂರಿ, ಭೀಮಸಿ ಪಾಟೀಲ, ದುಂಡಪ್ಪ ಪಾಟೀಲ, ಮಹಾದೇವ ಹುಚ್ಚನ್ನವರ, ಬಸು ಪಾಟೀಲ, ಸವಿತಾ ಹುಚ್ಚನ್ನವರ, ಮುತ್ತವ್ವ ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.