ಬೆಳಗಾವಿ: ಜಿಲ್ಲೆಯ ಗೋಕಾಕ ತಾಲ್ಲೂಕಿನ ಖನಗಾಂವದಲ್ಲಿ ಶುಕ್ರವಾರ ರಾತ್ರಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಫ್ಲೆಕ್ಸ್ ಹರಿದಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಶನಿವಾರ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಈ ಘಟನೆ ಖಂಡಿಸಿ ರಾಯಣ್ಣ ಅಭಿಮಾನಿಗಳು ಪ್ರತಿಭಟಿಸಿದರು. ಮೆರವಣಿಗೆ ನಡೆಸಿ, ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಖನಗಾಂವದ ರಾಯಣ್ಣ ವೃತ್ತದಲ್ಲಿ ಈ ಫ್ಲೆಕ್ಸ್ ಅಳವಡಿಸಲಾಗಿತ್ತು. ಕಿಡಿಗೇಡಿಗಳು ಇದನ್ನು ಹರಿದುಹಾಕಿ ಆತಂಕಕ್ಕೆ ಕಾರಣವಾದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.
ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಗೋಕಾಕ ಗ್ರಾಮೀಣ ಪಿಎಸ್‌ಐ ಎನ್.ಆರ್.ಖಿಲಾರಿ, ‘ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಫ್ಲೆಕ್ಸ್ ಹರಿದುಹಾಕಿದ್ದಾನೆ ಎಂಬ ಸಂಶಯವಿದೆ. ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಯಾವುದೇ ವದಂತಿಗೆ ಕಿವಿಗೊಡದೆ ಶಾಂತಿ ಕಾಪಾಡಲು ಸಹಕರಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.