ADVERTISEMENT

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ಡಾ.ಅಂಜಲಿ ನಾಮಪತ್ರ ಸಲ್ಲಿಕೆ ಏ.16ರಂದು

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2024, 15:18 IST
Last Updated 6 ಏಪ್ರಿಲ್ 2024, 15:18 IST
ಡಾ.ಅಂಜಲಿ ನಿಂಬಾಳಕರ
ಡಾ.ಅಂಜಲಿ ನಿಂಬಾಳಕರ   

ಖಾನಾಪುರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳಕರ ಏ.16ರಂದು ಕಾರವಾರದ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮುಖಂಡ ಭರತೇಶ ತೋರೋಜಿ ಹೇಳಿದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಡಾ.ಅಂಜಲಿ ಅವರೊಂದಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ ದೇಶಪಾಂಡೆ, ಶಾಸಕರಾದ ಭೀಮಣ್ಣ ನಾಯ್ಕ, ಬಾಬಾಸಾಹೇಬ ಪಾಟೀಲ, ಸತೀಶ ಸೈಲ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಗಾಂವಕರ, ಮುಖಂಡರಾದ ನಿವೇದಿತಾ ಆಳ್ವಾ, ಪ್ರಶಾಂತ ದೇಶಪಾಂಡೆ ಸೇರಿದಂತೆ ಪಕ್ಷದ ರಾಜ್ಯ ಹಾಗೂ ಜಿಲ್ಲಾ ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ. ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಳಗಾವಿ ಜಿಲ್ಲೆಯ ಕಿತ್ತೂರು ಮತ್ತು ಖಾನಾಪುರ ವಿಧಾನಸಭಾ ಕ್ಷೇತ್ರಗಳಿಂದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕಾರವಾರಕ್ಕೆ ತೆರಳಲಿದ್ದಾರೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT