ADVERTISEMENT

ರೈತ ನಾಯಕ ಹಾಗೂ ಕೇಂದ್ರದ ಮಾಜಿ‌ ಸಚಿವ ಬಾಬಾಗೌಡ ಪಾಟೀಲ ನಿಧನ

​ಪ್ರಜಾವಾಣಿ ವಾರ್ತೆ
Published 21 ಮೇ 2021, 4:21 IST
Last Updated 21 ಮೇ 2021, 4:21 IST
ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ
ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ   

ಬೆಳಗಾವಿ: ರೈತ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ (78) ಅನಾರೋಗ್ಯದಿಂದ ಇಲ್ಲಿನ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.

ಬೈಲಹೊಂಗಲ ತಾಲ್ಲೂಕಿನ ಚಿಕ್ಕಬಾಗೇವಾಡಿ ಗ್ರಾಮದವರಾದ ಅವರು ರೈತ ಸಂಘದ ಮೂಲಕ ಹೋರಾಟ ಆರಂಭಿಸಿದ್ದರು.

ADVERTISEMENT

ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ 1998ರಲ್ಲಿ ಸ್ಪರ್ಧಿಸಿ ಇಲ್ಲಿ ಬಿಜೆಪಿಯ ಗೆಲುವಿನ ಖಾತೆ ಆರಂಭಿಸಿದ್ದರು. ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ಸಚಿವರೂ ಆಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿಯೊಂದಿಗಿನ ಸಖ್ಯವನ್ನು ಕಡಿಮೆ ಮಾಡಿಕೊಳ್ಳುತ್ತಾ ಹೋಗಿದ್ದರು.

ರೈತ ಪರ ಹೋರಾಟದ ಮುಂಚೂಣಿಯಲ್ಲಿದ್ದರು. ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತಂದಿರುವುದು ರೈತರಿಗೆ ಮರಣಶಾಸನವಾಗಿದೆ ಎಂದು ಹೇಳುತ್ತಾ ಕೇಂದ್ರ ಸರ್ಕಾರದ ವಿರುದ್ಧದ ಹೋರಾಟದ ನೇತೃತ್ವ ವಹಿಸಿದ್ದರು. ಕಿಸಾನ್ ಮಹಾಪಂಚಾಯತ್ ನಲ್ಲೂ ಮುಂಚೂಣಿಯಲ್ಲಿದ್ದರು. ಈಚೆಗೆ ನಡೆದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ಮಾಡಿದ್ದರು. ಕಾಂಗ್ರೆಸ್‌ನ ಸತೀಶ ಜಾರಕಿಹೊಳಿ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.