ಬೆಳಗಾವಿ: ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ ವಿವಾದಿತ ನಕ್ಷೆ ಮತ್ತು ಗ್ರಾಫಿಕ್ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಈಚೆಗೆ ಪೋಸ್ಟ್ ಹಾಕಿ, ಭಾಷಾ ಸಾಮರಸ್ಯ ಕದಡುವ ಪ್ರಯತ್ನ ನಡೆಸಿದ್ದ ಇಲ್ಲಿನ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಯುವ ಘಟಕದ ಅಧ್ಯಕ್ಷ ಶುಭಂ ಶೆಳಕೆ ವಿರುದ್ಧ ನಗರದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತ ವಿನಾಯಕ ಭೋವಿ ನೀಡಿದ ದೂರಿನ ಮೇರೆಗೆ, ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಪೋಸ್ಟ್ ಅಳಿಸುವಂತೆ ಪೊಲೀಸರು ನೀಡಿದ್ದ ಸೂಚನೆಗೆ ಶುಭಂ ಸೊಪ್ಪು ಹಾಕಿರಲಿಲ್ಲ. ಠಾಣೆಗೆ ಕರೆಸಿ ಎಚ್ಚರಿಕೆ ನೀಡಿದ್ದರೂ ಜಗ್ಗಿರಲಿಲ್ಲ. ಈ ನಡುವೆ, ದೂರು ಆಧರಿಸಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.